ಫೆ.20ರಂದು ಮ್ಯಾದನಹೊಳೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

by | 15/02/23 | ಸುದ್ದಿ

ಚಿತ್ರದುರ್ಗ ಫೆ.15:
ಹಿರಿಯೂರು ತಾಲ್ಲೂಕಿನ ಮ್ಯಾದನಹೊಳೆ ಗ್ರಾಮದಲ್ಲಿ ಇದೇ ಫೆಬ್ರವರಿ 20ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಡಿ.ಮದಕರಿಪುರ, ಚಳ್ಳಕೆರೆ ತಾಲ್ಲೂಕಿನ ದೊಡ್ಡ ಉಳ್ಳಾರ್ತಿ, ಹೊಸದುರ್ಗ ತಾಲ್ಲೂಕಿನ ನರಸೀಪುರ, ಹೊಳಲ್ಕೆರೆ ತಾಲ್ಲೂಕಿನ ಕೆಂಚಾಪುರ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಭೈರಾಪುರ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *