ಚಳ್ಳಕೆರೆ ಫೆ.22:
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಶ್ರೀ ವಾತ್ಸಲ್ಯ ಸೋಷಿಯಲ್ ಮತ್ತು ಕಲ್ಚರಲ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತೋತ್ಸವ ಸವಿನೆನಪು ಸಾಂಸ್ಕøತಿಕ ಕಾರ್ಯಕ್ರಮವನ್ನು ಇದೇ ಫೆಬ್ರವರಿ 23ರಂದು ಸಂಜೆ 4ಕ್ಕೆ ಚಳ್ಳಕೆರೆ ತಾಲ್ಲೂಕು ಪಿ.ಮಹದೇವಪುರ ಸರ್ಕಾರಿ ಪ್ರೌಢಶಾಲೆ ಮೈದಾನದ ಸುವರ್ಣ ಮಹೋತ್ಸವ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದೆ.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಾಗೂ ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಶೇಖರ್ ಉದ್ಘಾಟಿಸುವರು. ಪಿ.ಮಹದೇವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ತ್ಯಾಗರಾಜ ಹಾಗೂ ಉಪಾಧ್ಯಕ್ಷೆ ಎಂ.ರತ್ನಮ್ಮ ಅಧ್ಯಕ್ಷತೆ ವಹಿಸುವರು. ಆಂಧ್ರ ಗಡಿನಾಡು ಘಟಕ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಹೆಚ್.ರಾಮಚಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗಡಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ.ಹೊನ್ನಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಸುರೇಶ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments