ಚಿತ್ರದುರ್ಗ ಫೆ.26:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರು ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ-2024, ಮಕ್ಕಳ ಕಲಾ ತಂಡಗಳಿಂದ ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಇದೇ ಫೆ.28ರಂದು ಬೆಳಿಗ್ಗೆ 10 ಗಂಟೆಗೆ ನಗರದ ತ.ರಾ.ಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದ ಎ. ನಾರಾಯಣಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಶಾಸಕ ವೀರೇಂದ್ರ (ಪಪ್ಪಿ) ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ. ರಘುಮೂರ್ತಿ, ಎಂ.ಚಂದ್ರಪ್ಪ, ಎನ್.ವೈ. ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ. ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ ಮಲ್ಲಿಕಾರ್ಜುನ್ ಭಾಗವಹಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments