ಹಿರಿಯೂರು ಸೆ12
ಸಮಾಜದ ಜನರ ಬದಲಾದ ಜೀವನ ಶೈಲಿ, ಆಹಾರ ಪದ್ದತಿ ಹಾಗೂ ಒತ್ತಡದ ಜೀವನದಿಂದ ಇಂದು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬುದಾಗಿ ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.
ನಗರದ ಹೊರವಲಯದಲ್ಲಿರುವ ವ್ಯೆಟ್ ವಾಲ್ ಸಭಾಂಗಣದಲ್ಲಿರುವ ಜಯದೇವ ಆಸ್ಪತ್ರೆ ವ್ಯೆದ್ಯರ ತಂಡದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯೆಧ್ಯಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಡಿಯೋ ಹಾಗೂ ಮಧುಮೇಹ ರೋಗ ನಿರ್ವಹಣೆ ಕುರಿತ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರಲ್ಲಿ ಅದರಲ್ಲಿಯೂ ಮಧ್ಯ ವಯಸ್ಕರಲ್ಲಿ ಹೃದಯದ ಮೇಲೆ ಅತಿಯಾದ ಒತ್ತಡ ಹಾಕುತ್ತೇವೆ. ಇದರಿಂದ ಹೃದಯದ ಸಮಸ್ಯೆಗಳು ಆಗಾಗ ಕಾಡುತ್ತವೆ. ಆದ್ದರಿಂದ ಯುವಕರು ತಮ್ಮ ಜೀವನ ಶೈಲಿ ಹಾಗೂ ಆಹಾರ ಸೇವನೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂಬುದಾಗಿ ಅವರು ಹೇಳಿದರು.
ಹಳ್ಳಿಗಳಲ್ಲಿ ಯಾರಿಗಾದರೂ ಹೃದಯಾಘಾತ ಸಂಭವಿಸಿದರೆ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಹೇಗೆ ನೀಡಬೇಕು, ರೋಗಿಗೆ ಯಾವುದೇ ತೊಂದರೆಯಾಗದಂತೆ ಮುಂದಿನ ಚಿಕಿತ್ಸೆಗೆ ದೊಡ್ಡ ಆಸ್ಪತ್ರೆಗಳಿಗೆ ವರ್ಗಾಯಿಸುವುದರ ಬಗ್ಗೆ ಹಾಗೂ ಈ ಸಮಯದಲ್ಲಿ ಬಿಪಿ, ಶುಗರ್ ಏರಿಕೆಯಾಗದಂತೆ ಚಿಕಿತ್ಸೆ ನೀಡುವ ಬಗ್ಗೆ ವ್ಯೆದ್ಯರಿಗೆ ಅವರು ಮಾಹಿತಿ ನೀಡಿದರು.
ಜಯದೇವ ಆಸ್ಪತ್ರೆ ಹಿರಿಯ ವ್ಯೆದ್ಯ ಡಾ.ರವೀಂದ್ರನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಭಯವೇ ಹೃದಯಾಘಾತ ಈಗ ಇಳಿವಯಸ್ಸಿನಲ್ಲಿ ಕಾಣಿಸುತ್ತಿದ್ದ ಈ ಹೃದಯಘಾತ ಈಗ ಯುವಜನತೆಯಲ್ಲಿ ಸಾಮಾನ್ಯ ಕಾಯಿಲೆ ಎಂಬಂತಾಗಿದೆ. ಆದ್ದರಿಂದ ಯುವಜನತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಯದೇವ ಆಸ್ಪತ್ರೆಯ ಡಾ.ರಾಜೇಂದ್ರ ಪ್ರಸಾದ್, ಡಾ.ಶಂಕರ್, ಡಾ.ಪೂಜಾಶಂಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಂಗನಾಥ್, ಡಾ.ಚಂದ್ರಶೇಖರ್ ಕಂಬಾಳಿಮಠ್, ಡಾ.ರೇಣುಪ್ರಸಾದ್, ಡಾ.ಕಾಶಿ, ತಾಲೂಕ್ ಆರೋಗ್ಯಧಿಕಾರಿ ಡಾ.ವೆಂಕಟೇಶ್ ಹಾಗೂ ಹಲವಾರು ವ್ಯೆದ್ಯರು ಉಪಸ್ಥಿತರಿದ್ದರು.
ಬದಲಾದ ಜೀವನಶೈಲಿ ಹಾಗೂ ಒತ್ತಡದ ಜೀವನದಿಂದ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ : ಡಾ.ಮಂಜುನಾಥ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments