ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಒತ್ತು-ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟ

by | 31/01/24 | ಸುದ್ದಿ


ಕರ್ನಾಟಕ ವಾರ್ತೆ ಜ. 31 :
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಪ್ರಸ್ತುತ ಬರ ಪರಿಸ್ಥಿತಿ ಇದ್ದು, ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲು ಶ್ರಮಿಸುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರೊಂದಿಗೆ ಪರಿಚಯಾತ್ಮ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಮೊದಲು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‍ಆರ್‍ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಇದೀಗ ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದೇನೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ ಅನುಭವವಿದೆ, ಹೀಗಾಗಿ ಇಲ್ಲಿನ ಸಮಸ್ಯೆಗಳ ಬಗ್ಗೆಯೂ ಮಾಹಿತಿ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಬರ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ದೂರದೂರುಗಳಿಂದ ತಮ್ಮ ಕೆಲಸ ಕಾರ್ಯಗಳಿಗೆ, ವಿವಿಧ ಬಗೆಯ ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಾರೆ. ಅಂತಹವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತಾಗಬಾರದು, ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಒಂದನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪಡೆದು, ಅವರಿಗೆ ಸ್ವೀಕೃತಿ ನೀಡಲಾಗುವುದು. ಅಲ್ಲದೆ ಅಂತಹ ಅರ್ಜಿಗಳನ್ನು ಗಣಕೀಕರಣಗೊಳಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡಲು, ಅರ್ಜಿಗಳಿಗೆ ಸ್ಪಂದಿಸಲು ವಿಶೇಷ ಆದ್ಯತೆ ನೀಡಲಾಗುವುದು. ಅರ್ಜಿಗಳ ವಿಲೇವಾರಿ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಪರಿಶೀಲನೆ ಮಾಡಲಾಗುವುದು. ಜಿಲ್ಲಾಧಿಕಾರಿಯಾಗಿ ಕಚೇರಿಗೆ ಮಾತ್ರ ಸೀಮಿತವಾಗದೇ, ಗ್ರಾಮಗಳಿಗೆ ತೆರಳಿ, ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯಲು ಬಯಸುತ್ತೇನೆ. ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಒದಗಿಸಲು ಶ್ರಮಿಸುವ ಮೂಲಕ ಜನಸ್ನೇಹಿ ಆಡಳಿತ ನೀಡುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ಸೇರಿದಂತೆ ಜಿಲ್ಲಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಮಾಧ್ಯಮಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page