ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು, ಸಮರ್ಪಕ ಕುಡಿಯುವ ನೀರು, ಯೋಜನೆÀಗಳನ್ನು ಜನರಿಗೆ ತಲುಪಿಸಿ :sಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್.

by | 22/11/23 | ಸುದ್ದಿ


ದಾವಣಗೆರೆ: ನ. 21 : ಈ ವರ್ಷ ಮುಂಗಾರು ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನಿರು ಪೂರೈಕೆ ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಗಣಿ ಮತ್ತು ಭೂವಿಜ್ಞಾನÀ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದರು.
ಅವರು ಮಂಗಳವಾರ (ನ.21 ) ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಿದÀರು. ಬರ ಸ್ಥಿತಿ ಇರುವುದರಿಂದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಹುದು. ಈ ಸಮಸ್ಯೆಯನ್ನು ಎದುರಿಸಲು ಎಲ್ಲ ಗ್ರಾಮ ಪಂಚಾಯಿತಿ ಪಿಡಿಓ, ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಲಭ್ಯರಿದ್ದು, ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.
ಶುದ್ದ ಕುಡಿಯುವ ನೀರಿನ ಘಟಕ ನಿವಾರಣೆ: ಜಗಳೂರು ತಾಲ್ಲೂಕು ಬರ ಪೀಡಿತ ಪ್ರದೇಶವಾಗಿದ್ದು, 48 ಗ್ರಾಮಗಳು ಪ್ಲೋರ್‍ಡ್‍ಯಿಂದ ಕೂಡಿವೆ ಈ ಗ್ರಾಮಗಳಲ್ಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಮತ್ತು ಈಗಾಗಲೇ ಸ್ಥಾಪಿಸಲಾಗಿರುವ ಘಟಕಗಳ ಸರಿಯಾದ ನಿರ್ವಹಣೆÉ ಮಾಡಿ ಜನರಿಗೆ ತೊಂದರೆಯಾಗಂದಂತೆ ನೀರು ಪೂರೈಕೆ ಮಾಡಲು ಸೂಚಿಸಿ ತಾಲ್ಲೂಕಿನಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ಲೋರ್‍ರೈಡ್ ಸಮಸ್ಯೆ ನಿವಾರಣೆ ಆಗಲಿದೆ ಎಂದರು.
ತೋಟಗಾರಿಕೆ: ಜಿಲ್ಲೆಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಸಹಾಯಧನÀ ಯೋಜನೆಯಡಿ ಈ ವರ್ಷ ರೂ.50 ಕೋಟಿ ಮೀಸಲಿರಿಸಲಾಗಿದೆ. ಆದರಲ್ಲಿ ಜಗÀಳೂರು ತಾಲ್ಲೂಕಿಗೆ ರೂ.5 ಕೋಟಿ ಅನುದಾನ ನೀಡಲಾಗುತ್ತಿದೆ. ಮತ್ತು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬೇಡಿಕೆಗೆ ಅನುಸಾರವಾಗಿ ಒದಗಿಸಲಾಗುತ್ತದೆ, ಯಾವುದೇ ಅನುದಾನದ ಕೊರತೆ ಇರುವುದಿಲ್ಲ ಎಂದರು.
ಖಾತರಿಯಡಿ ಉದ್ಯೋಗ: ಬರ ಹಿನ್ನಲೆಯಲ್ಲಿ ಜನರಿಗೆ ಹೆಚ್ಚಿನ ಉದ್ಯೋಗ ನೀಡಬೇಕಾಗಿದೆ ಪ್ರತಿ ಕುಟುಂಬಕ್ಕೆ ಈಗಿರುವ 100 ದಿನಗಳಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುಮೋದನೆಯಾಗಿರುವುದಿಲ್ಲ. ಆದರೂ ಸಹ ಬೇಡಿಕೆಗೆ ಅನುಗುಣವಾಗಿ ಹೆಚ್ಚು ಖಾತರಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ಬಿಸ್ತುವಳ್ಳಿ, ದೇವಿಕೆರೆ, ಗುರುಸಿದ್ದಾಪುರ, ಹನುಮಂತಪುರ, ಇಲ್ಲಿ ಶೇ25 ಕ್ಕಿಂತ ಕಡಿಮೆ ಉದ್ಯೋಗ ಖಾತರಿ ಕೆಲಸ ಮಾಡಲಾಗಿದೆ. ಇದರ ಪ್ರಗತಿಯನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಿದರು.
ಕೃಷಿ: ಜಗಳೂರು ತಾಲ್ಲೂಕಿನಲ್ಲಿ 409 ಮೀ.ಮೀ ವಾಡಿಕೆಗೆ 361 ಮೀ.ಮೀ ಮಳೆಯಾಗಿದೆ. ಜುಲೈ ತಿಂಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಿದ್ದು, ಆಗಸ್ಟ್, ಸೆಪ್ಟೆಂಬರ್‍ನಲ್ಲಿ ಮಳೆ ತೀವ್ರ ಕೊರತೆಯಿಂದ ಶೇ.80 ರಷ್ಟು ಬೆಳೆ ನಷ್ಟವಾಗಿದೆ. ಈ ವರ್ಷ 18,250 ರೈತರು ಫಸಲ್ ಭೀಮಾ ಯೋಜನೆಗೆ ನೊಂದಾಯಿಸಿದ್ದಾರೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಸಚಿವರು ಮಾತನಾಡಿ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಬಂದಾಗ ಎನ್‍ಡಿಆರ್‍ಎಫ್ ಮಾರ್ಗಸೂಚಿನ್ವಯ ರೂ.259 ಕೋಟಿ ಬೆಳೆ ನಷ್ಟ ವರದಿಯನ್ನು ನೀಡಲಾಗಿದೆ. ತತ್‍ಕ್ಷಣವೇ ಕೇಂದ್ರದಿಂದ 38 ಕೋಟಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕಾಗಿದೆ ಎಂದ ಅವರು ಬೆಳೆವಿಮೆ ಮಾಡಿಸಿದ ರೈತರಿಗೆ ವಿಮಾ ಪರಿಹಾರ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರು: ತಾಲ್ಲೂಕಿನಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಟಾಸ್ಕ್ ಪೋರ್ಸ್‍ನಡಿ ಶಾಸಕರು ಸೂಚಿಸುವ ಗ್ರಾಮಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ಪೂರೈಕೆ ವಿಭಾಗದ ಅಧಿಕಾರಿಗಳು ತಾಲ್ಲೂಕಿನ 168 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 472 ಕೋಟಿ.ರೂಗಳಿಗೆ ಯೋಜನೆ ತಯಾರಿಸಿದ್ದು ಅನುಮೋದನೆಯ ಹಂತದಲ್ಲಿ ಇದೆ ಎಂದು ತಿಳಿಸಿದರು.
ಜಗಳೂರು ಪಟ್ಟಣ ಪಂಚಾಯಿತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 63 ಕೊಳವೆ ಬಾವಿಗಳು ಮತ್ತು ಶಾಂತಿ ಸಾಗರ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಮುಖ್ಯಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು ಈ ವೇಳೆ ಸಚಿವರು ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ಗೃಹ ಲಕ್ಷ್ಮೀ: ತಾಲ್ಲೂಕಿನಲ್ಲಿ 38,024 ಗೃಹ ಲಕ್ಷ್ಮೀ ಫಲನುಭವಿಗಳಿಗೆ ಮಾಸಿಕ ರೂ.2000 ಪಾವತಿಸಲಾಗಿದೆ. ಆದರೆ 1106 ಫಲಾನುಭವಿಗಳಿಗೆ ಆಧಾರ್ ಲಿಂಕ್ ಆಗದ ಕಾರಣ ಪಾವತಿಯಾಗಿರುವುದಿಲ್ಲ. ಇವರಿಗೆ ಆಧಾರ್ ಲಿಂಕ್ ಮಾಡಿಸಿ ಯೋಜನೆಯನ್ನು ತಲುಪಿಸಲು ಸೂಚನೆ ನೀಡಿದರು.
ಶಾಸಕರಾದ ಬಿ.ದೇವೆಂದ್ರಪ್ಪ ಮಾತಾನಾಡಿ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸಮಸ್ಯೆ ಇದ್ದ ಕಡೆ ತುರ್ತು ಕ್ರಮಗಳು ಆಗಬೇಕು. ಮುಂದಿನ ದಿನಗಳಲ್ಲಿ ನೀರಿನ ಅಭಾವ ಆಗುತ್ತದೆ. ಹೊಸ ಕೊಳವೆ ಬಾವಿ ಸಫಲತೆ ಶೇ.50ಕ್ಕೆ ಇಳಿದಿದೆ. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿ ಗುರಿತಿಸಿಟ್ಟುಕೊಳ್ಳಲು ತಿಳಿಸಿ, ಇತ್ತಿಚೀನ ದಿನಗಳಲ್ಲಿ ಬರದ ಜೊತೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ, ಅವರ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ. ತಮ್ಮ ಕಾರ್ಯವೈಕರಿಯನ್ನು ಸರಿಪಡಿಸಿಕೊಳ್ಳದಿದಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳುವ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಇಟ್ನಾಳ್, ಅಪಾರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page