ಬಳ್ಳಾರಿ: ರಾಷ್ಟೀಯ ಲೋಕ್ ಅದಾಲತ್ ನಲ್ಲಿ ಒಟ್ಟು 5,634 ಪ್ರಕರಣ ರಾಜೀ ಸಂಧಾನ; ಒಟ್ಟು ರೂ.28.54 ಕೋಟಿ ಪರಿಹಾರ ಸಂಗ್ರಹ: ನ್ಯಾ.ಪುಷ್ಪಾಂಜಲಿ ದೇವಿ

by | 09/12/23 | ಕಾನೂನು

ಬಳ್ಳಾರಿ,ಡಿ.09
ಜಿಲ್ಲೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮತ್ತು ಹಳೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ, ರಾಷ್ಟೀಯ ಲೋಕ್ ಅದಾಲತ್ ನಲ್ಲಿ ಒಟ್ಟು 5,634 ಪ್ರಕರಣಗಳು ರಾಜೀ ಸಂಧಾನಗೊಂಡಿದ್ದು, ಒಟ್ಟು ರೂ.28,54,12,760 ಪರಿಹಾರ ಸಂಗ್ರಹವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿತ್ತು.

ಶನಿವಾರದಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಒಟ್ಟು 31 ಪೀಠಗಳನ್ನು ಸ್ಥಾಪಿಸಲಾಗಿತ್ತು. ಜಿಲ್ಲೆಯ ವಿವಿಧ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ನಾನಾ ರೀತಿಯ ರಾಜೀ ಆಗಬಹುದಾದಂತಹ ಸುಮಾರು 10,404 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 5,634 ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ಒಟ್ಟು 28,54,12,760 ರೂ.ಗಳ ಮೊತ್ತದ ಪರಿಹಾರ ಸಂಗ್ರಹವಾಗಿದೆ ಎಂದು ನ್ಯಾ.ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.

ಕೌಟುಂಬಿಕ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ನ ಪೀಠದಲ್ಲಿ ಸುಮಾರು 2 ಜೋಡಿ ದಂಪತಿಗಳನ್ನು ಯಶಸ್ವಿಯಾಗಿ ರಾಜೀ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿಯ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರು, ಅರ್ಜಿದಾರರ ಪರ ವಕೀಲರು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಕಕ್ಷಿದಾರರು ಭಾಗವಹಿಸಿ, ಯಶಸ್ವಿಗೊಳಿಸಿದ್ದಾರೆ.

ಕಕ್ಷಿದಾರರು ಹಾಗೂ ವಕೀಲರು ಸೇರಿ ರಾಷ್ಟ್ರೀಯ ಲೋಕ್ ಅದಾಲತ್‍ನ ಬೈಠಕ್‍ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ತಮ್ಮ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ರಾಜಿ ಸಂಧಾನ ಮಾಡಿಕೊಂಡರು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪುಷ್ಪಾಂಜಲಿ ದೇವಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಇದ್ದರು.
———

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page