ಬಸ್ಸಿಗಾಗಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಎನ್.ದೇವರಹಳ್ಳಿ ಗ್ರಾಮದ ವಿದ್ಯಾರ್ಥಿಗಳು.

by | 16/11/23 | Uncategorized

ನಾಯಕನಹಟ್ಟಿ ನ. 16. ಶಕ್ತಿ ಯೋಜನೆ ಹಿನ್ನೆಲೆ ಬಹುತೇಕ ಬಸ್​ಗಳು ಫುಲ್ ರಶ್ ಆಗುತ್ತಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಹಲವೆಡೆ ಬಸ್​ಗಾಗಿ ಪ್ರತಿಭಟನೆಗಳನ್ನು ಮಾಡಲು ಮುಂದಾಗಿದ್ದಾರೆ.


ಹೌದು ಗುರುವಾರ ಬೆಳ್ಳಂ ಬೆಳಗ್ಗೆ ವಿದ್ಯಾರ್ಥಿಗಳು ತಾಲೂಕಿನ ಕರಿಕೆರೆ ಗ್ರಾಮ ಸೇರಿದಂತೆ ನಾಯಕನಹಟ್ಟಿ ಹೋಬಳಿಯ ವಿವಿಧ ಗ್ರಾಮದ ವಿದ್ಯರ್ಥಿಗಳು ಸಾರಿಗೆ ಬಸ್ ತಡೆದು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.
ಕರ್ನಾಟಕದ ರಾಜ್ಯ ಸರ್ಕಾರ ಅಧಿಕಾರದ ಗದ್ದಿಗೆ ಏರಿದ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುವಂತಾಗಿದೆ. ಚಳ್ಳಕೆರೆ ತಾಲೂಕು ಕೇಂದ್ರಕ್ಕೆ ಸುಮಾರು 30 ಕ್ಕೂ ಹೆಚ್ಚು ಕಿ.
ಮೀ‌ ದೂರದ ನಾಯಕನಹಟ್ಟಿ ಹೋಬಳಿಯ ಎನ್ ಮಹದೇವಪುರ, ಗೌರಿಪುರ, ಎನ್ ದೇವರಹಳ್ಳಿ, ಭೀಮನಕೆರೆ ಕಾರ್ತಿಕನಹಟ್ಟಿ ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ-ಕಾಲೇಜಿಗೆ ಇರುವ ಒಂದು ಬಸ್ಸಿನಲ್ಲಿ ಕುರಿಗಳಂತೆ ಉಸಿರುಗಟ್ಟಿಸುವ ವಾತಾವರಣದಲ್ಲಿ ಕಾಲೇಜಿಗೆ ಹೋಗುವ ಪರಿಸ್ಥಿತಿ ಇದ್ದು ಇನ್ನು ಕೆಲವು ವಿದ್ಯಾರ್ಥಿಗಳು ಬಸ್ಸಿನಲ್ಲಿ ಸ್ಥಳವಕಾಶವಿಲ್ಲದೆ ಬೈಕ್ ಅಥವಾ ಆಟೋದಲ್ಲಿ ಹೋಗುತ್ತಾರೆ ಬೈಕ್ ಇಲ್ಲವರು ಏನು ಮಾಡಬೇಕು ಎಂಬ ಪ್ರಶ್ನೆ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮಾತ್ರ ಪ್ರಾಯಣಿಕರಿಗೆ ಅನುಗುಣವಾಗಿ ಹೆಚ್ಚುವರಿ ಬಸ್ ಗಳನ್ನು ರಸ್ತೆಗೆ ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಇಂದು ಎನ್ ದೇವರಹಳ್ಳಿಗ್ರಾಮದ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡುತ್ತಿದೆ ದಿನ ಬೆಳಗಾದರೆ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಬಸ್ಸಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚುವರಿ ಬಸ್ ನೀಡುವಂತೆ ಒತ್ತಾಯಿಸಿದ್ದಾರೆ.
ಶಕ್ತಿಯೋಜನೆಯಿಂದಾಗಿ ನಮಗೆ ಬಸ್​ ಸಿಗುತ್ತಿಲ್ಲ,
ಸರ್ಕಾರಿ ಬಸ್​ಗಳ ಕೊರತೆ ಎದುರಾಗಿದೆ. ಸರಿಯಾದ ಸಮಯಕ್ಕೆ ಬಸ್​ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಕ್ಲಾಸ್​ಗೆ ತಡವಾಗಿ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯರಿಗೆ ಉಚಿತ ಪ್ರಯಾಣ. ಶಕ್ತಿ ಯೋಜನೆ ಹಿನ್ನೆಲೆ ಬಹುತೇಕ ಬಸ್​ಗಳು ಫುಲ್ ರಶ್ ಆಗುತ್ತಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಹಲವೆಡೆ ಬಸ್​ಗಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ.


ರಾಜ್ಯದಲ್ಲಿ ಶಕ್ತಿ ಯೋಜನೆಯ ಎಫೆಕ್ಟ್​ನಿಂದ ಸರಿಯಾದ ಸಮಯಕ್ಕೆ ಬಸ್​ಗಳು ಬರುತ್ತಿಲ್ಲ. ನಾವು ಶಾಲೆಗಳಿಗೆ ಹೋಗಲು ಆಗುತ್ತಿಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ವಿಳಂಬವಾಗುತ್ತಿದೆ. ತರಗತಿಗಳು ತಪ್ಪುತ್ತಿವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಸೂಕ್ತ ಬಸ್​ಗಳನ್ನು ಬಿಡಬೇಕೆಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ- ವಿದ್ಯಾರ್ಥಿಗಳಾದ ದೀಪಾ ಬಾಯಿ ,ಆರ್ ಸುಷ್ಮಾ, ಮಾದೇಶ ,ರಶ್ಮಿ, ಅಭಿ, ಆಕಾಶ್, ತಿಪ್ಪೇಸ್ವಾಮಿ, ನಾಗರಾಜ್, ಸುಚಿತ್ರ, ಕೀರ್ತಿರಾಜ್, ವಿಶ್ವನಾಥ್, ಕಾವ್ಯ, ಸೇರಿದಂತೆ ಇದ್ದರು

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page