ಬಾಣಂತಿಯರಿಗೆ ರಕ್ತಹೀನತೆ: ಪೌಷ್ಟಿಕ ಆಹಾರ ಸೇವನೆ ಮುಖ್ಯ -ಜಿ.ಎನ್.ಶ್ರೀನಿವಾಸ್

by | 07/11/23 | ಆರೋಗ್ಯ


ಬಳ್ಳಾರಿ,ನ.07
ಬಾಣಂತಿಯರಲ್ಲಿ ರಕ್ತಹೀನತೆಯನ್ನು ಕಡಿಮೆಗೊಳಿಸಲು, ಗರ್ಭೀಣಿಯ ಅವಧಿಯಲ್ಲಿ ಸಕಾಲದಲ್ಲಿ ರಕ್ತಹೀನತೆ ಪರೀಕ್ಷೆ ಕೈಗೊಳ್ಳುವ ಮೂಲಕ ತಾಯಿ, ಮಗುವಿನ ಸುರಕ್ಷತೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವನೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಆರ್‍ಸಿಹೆಚ್‍ನ ಯೋಜನಾ ನಿರ್ದೇಶಕ ಡಾ.ಜಿ.ಎನ್.ಶ್ರೀನಿವಾಸ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾನೂನಿನ ಅನ್ವಯ 18 ವರ್ಷ ವಯಸ್ಸು ತುಂಬಿದ ನಂತರವೇ ಮದುವೆ ಮಾಡುವುದರ ಕುರಿತು ಕುರಿತು ಜನತೆಗೆ ಜಾಗೃತಿ ಮೂಡಿಸಬೇಕು. ಮನೆಗೆ ಬಂದ ಸೊಸೆಯು ಗರ್ಭೀಣಿ ಎಂದು ತಿಳಿದ ದಿನದಿಂದಲೇ ಗರ್ಭಿಣಿಯ ಆರೈಕೆಯನ್ನು ಕುಟುಂಬದ ಸದಸ್ಯರು ಮನೆಯ ಮಗಳಂತೆ ಕಾಳಜಿ ವಹಿಸಬೇಕು. ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಆದ್ಯತೆ ನೀಡುವಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಗರ್ಭಿಣಿ ಎಂದು ತಿಳಿದ ದಿನದಿಂದಲೇ ತಾಯಿಕಾರ್ಡ್ ಒದಗಿಸಬೇಕು. ರಕ್ತ ಹೀನತೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಪರೀಕ್ಷೆ ಕೈಗೊಂಡು ತಡೆಯಲು ಕನಿಷ್ಠ 180 ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಸೇವಿಸುವಂತೆ ಆಶಾಕಾರ್ತೆಯರು ತಿಳಿಸಬೇಕು ಎಂದು ಸೂಚಿಸಿದರು.
ಸ್ಥಳೀಯವಾಗಿ ದೊರಕುವ ಹಸಿರು ಪಲ್ಯ ತರಕಾರಿ ಹೊಂದಿದ ಪೌಷ್ಟಿಕ ಆಹಾರವನ್ನು ಸೇವಿಸುವಂತೆ ಮತ್ತು ಆಹಾರ ತಯಾರಿಸುವ ವಿಧಾನವನ್ನು ತಿಳಿಸುವ ಮೂಲಕ ಗರ್ಭಿಣಿಯರಲ್ಲಿ ರಕ್ತಹೀನತೆಯನ್ನು ಆರಂಭದಲ್ಲೇ ತಡೆಯುವ ಅಗತ್ಯವಿದೆ ಎಂದು ಹೇಳಿದರು.
ಆರೋಗ್ಯ ಕೇಂದ್ರಕ್ಕೆ ಬರುವ ಹಿರಿಯ ನಾಗರಿಕರು ಹಾಗೂ ಜನಸಾಮಾನ್ಯರನ್ನು ರಕ್ತದೊತ್ತಡ ಪರೀಕ್ಷೆ, ಸಕ್ಕರೆ ಕಾಯಿಲೆ ಪರೀಕ್ಷೆ ಕ್ಷಯರೋಗದ ಪರೀಕ್ಷೆ, ನೇತ್ರ ಪರೀಕ್ಷೆ ಮುಂತಾದವುಗಳನ್ನು ಕೈಗೊಂಡು ಅವರಿಗೆ ಅಗತ್ಯವಿದ್ದಲ್ಲಿ ಸೂಕ್ತ ಔಷದೋಪಚಾರ ಮಾಹಿತಿ ನೀಡುವ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಜನತೆಯ ವಿಶ್ವಾಸ ಗಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಆಯುಷ್ಮಾನ್ ಭವಃ ಅಭಿಯಾನದ ಪ್ರಗತಿ, ಅಂಗಾಂಗ ದಾನ ನೋಂದಣಿ, ಕುಟುಂಬ ಕಲ್ಯಾಣ ವಿಧಾನಗಳು, ಡೆಂಗ್ಯು ಮತ್ತು ಚಿಕನ್‍ಗುನ್ಯ ನಿಯಂತ್ರಣ, ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳ ನಿಯಂತ್ರಣಕ್ಕೆ ಮಕ್ಕಳ ಲಸಿಕಾ ಕಾರ್ಯಕ್ರಮ, ಅಂಧತ್ವ ನಿಯಂತ್ರಣ, ಮಾನಸಿಕ ಆರೋಗ್ಯ ಕಾರ್ಯಕ್ರಮ ಕುರಿತು ಪರಿಶೀಲಿಸಿದ ಅವರು, ರಾಜ್ಯಕ್ಕೆ ಬಳ್ಳಾರಿ ಜಿಲ್ಲೆ ಮಾದರಿಯಾಗುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು ಅವರು, ಜಿಲ್ಲೆಯಲ್ಲಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಡಾ.ಅರುಣ್, ಮುಖ್ಯ ವೈದ್ಯಾಧಿಕಾರಿ ಡಾ.ರಾಮಶೆಟ್ಟಿ, ಡಾ.ಗುರುನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಡಾ.ಜಬೀನ್ ತಾಜ್, ಡಿಎನ್‍ಒ ಗಿರೀಶ್, ಡಿಪಿಎಮ್ ವೆಂಕೊಬ್ ನಾಯ್ಕ್ ಸೇರಿದಂತೆ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ಸಿಪಿಎಮ್, ಆಶಾ ಮೇಲ್ವಿಚಾರಕರು, ಆರ್‍ಕೆಎಸ್‍ಕೆ ಸಂಯೊಜಕರು, ಬಿಎಪಿಎಮ್, ಬಿಹೆಚ್‍ಇಓ ಉಪಸ್ಥಿತರಿದ್ದರು.
*ಗುಣಮಟ್ಟದ ಸೇವೆಗೆ ಪ್ರಶಂಸೆ ಪತ್ರ ವಿತರಣೆ:*
ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಘಟಕ ವತಿಯಿಂದ ಹೆಚ್‍ಐವಿ ಪರೀಕ್ಷೆಯನ್ನು ಅತ್ಯಂತ ನಿಖರವಾಗಿ ಕೈಗೊಳ್ಳುವ ಜೊತೆಗೆ ಗುಣಮಟ್ಟದ ಸೇವೆಯನ್ನು ನೀಡುವ ಪ್ರಯೋಗ ಶಾಲೆ ಎಂದು ಗುರ್ತಿಸಲ್ಪಟ್ಟ ಬಳ್ಳಾರಿ ಜಿಲ್ಲಾ ಆಸ್ಪತ್ರೆ ಹಾಗೂ ವಿಮ್ಸ್‍ನ ಹೆಚ್‍ಐವಿ ಪರೀಕ್ಷಾ ಕೇಂದ್ರ ಮತ್ತು ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರ ಇವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *