ದಾವಣಗೆರೆ ಡಿ.5 ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ತಪಾಸಣೆಯಲ್ಲಿ ಮೂವರು ಕಿಶೋರ ಕಾರ್ಮಿಕರು ಅಪಾಯಕಾರಿ, ಅಪಾಯಕಾರಿಯಲ್ಲದ ಉದ್ದಿಮೆಯಲ್ಲಿ ಪತ್ತೆಯಾಗಿದ್ದು. ಪತ್ತೆಯಾದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ಮಾಲೀಕರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹಾಗೂ ಮಾಲೀಕರಿಗೆ ಕರಪತ್ರ & ಸ್ಟಿಕ್ಕರ್ಸ್ ನೀಡಿ ಜಾಗೃತಿ ಮೂಡಿಸಿದರು.
ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್, ರಾಜಪ್ಪ.ಟಿ, ಆರ್.ನಾಗೇಶ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಯೋಜನಾ ನಿರ್ದೇಶಕರು ಪ್ರಸನ್ನಇ.ಎನ್ ಉಪಸ್ಥಿತರಿದ್ದರು.
(ಫೋಟೋ ಇದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments