ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ- ಬಿ.ಟಿ. ಕುಮಾರಸ್ವಾಮಿ

by | 21/11/23 | ಸುದ್ದಿ

ಚಿತ್ರದುರ್ಗ ನ.21:
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡುವುದರ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾಮಟ್ಟದ ಕಾರ್ಯಪಡೆ ಹಾಗೂ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೀತಪದ್ಧತಿ ಹೇಗೆ ಮಾರಕ ಶಾಪ ಇದ್ದಂತೆ ಅದೇ ರೀತಿ ಬಾಲಕಾರ್ಮಿಕ ಪದ್ಧತಿಯೂ ಶಾಪ ಇದ್ದಂತೆ. ಹಾಗಾಗಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಲು ಪರಿಣಾಮಕಾರಿಯಾಗಿ ದಾಳಿ ನಡೆಸಿ, ತಪಾಸಣೆ ಮಾಡಬೇಕು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಇಟ್ಟಿಗೆಭಟ್ಟಿ, ಗ್ಯಾರೇಜ್, ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಬಾಲಕಾರ್ಮಿಕರು ಕಾರ್ಯನಿರ್ವಹಿಸುವ ಸಂಭವ ಹೆಚ್ಚಾಗಿರುವುದರಿಂದ ಕಾರ್ಮಿಕರು ನಿರೀಕ್ಷಕರು ಹಾಗೂ ತಹಶೀಲ್ದಾರ್‍ಗಳು ನಿಯಮಿತವಾಗಿ ದಾಳಿ ನಡೆಸಿ ತಪಾಸಣೆ ಮಾಡಬೇಕು. ಇದರಿಂದ ಜಾಗೃತಿ ಮೂಡಲಿದೆ. ಇದರ ಜೊತೆಗೆ ತಾಲ್ಲೂಕುವಾರು ಶಾಲಾ ಬಿಟ್ಟ ಮಕ್ಕಳ ಮಾಹಿತಿಯನ್ನೂ ಪಡೆದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 440 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಶಾಲೆಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಬಾಲ್ಯ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಚರ್ಚಾಸ್ಪರ್ಧೆ ನಡೆಸಬೇಕು.ಇದರ ಜೊತೆಗೆ ಜನಸಂದಣಿ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು.
ಕಾರ್ಮಿಕ ಅಧಿಕಾರಿ ಇಬ್ರಾಹಿಂ ಮಾತನಾಡಿ, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಲು ತಪಾಸಣೆ ಹಾಗೂ ಪುನರ್ವಸತಿ ಕಲ್ಪಿಸುವ ಸಲುವಾಗಿ ಈಗಾಗಲೇ ಜಿಲ್ಲಾಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಪ್ರತಿ ಮಾಹೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಿ ತಪಾಸಣೆ ಮಾಡಿದ ವರದಿಯನ್ನು ಕಾರ್ಮಿಕ ನಿರೀಕ್ಷಕರು ಕಾಲಕಾಲಕ್ಕೆ ವರದಿ ಸಲ್ಲಿಸಬೇಕು ಎಂದರು.
ಜಿಲ್ಲೆಯಾದ್ಯಂತ 1986ರ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಅಡಿಯಲ್ಲಿ ಕಾರ್ಮಿಕ ನಿರೀಕ್ಷಕರು 2023ರ ಏಪ್ರಿಲ್ 1 ರಿಂದ ಅಕ್ಟೋಬರ್ 31 ರವರೆಗೆ ಒಟ್ಟು 294 ತಪಾಸಣೆ ಮಾಡಲಾಗಿದ್ದು, 9 ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ, ಪುನರ್ ವಸತಿಗೊಳಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಪಾನ್-ಇಂಡಿಯಾ ರೆಸ್ಕ್ಯೂ ಅಂಡ್ ರಿಹ್ಯಾಬಿಲಿಟೇಶನ್ ಕ್ಯಾಂಪೈನ್ ಆಫ್ ಚೈಲ್ಡ್ ಅಂಡ್ ಅಡೋಲ್ಸೆಂಟ್ ಲೇಬರ್ ಫಾರ್ಮ್ ಅನ್ನು ನವೆಂಬರ್ 20 ರಿಂದ ಡಿಸೆಂಬರ್ 10 ರವರೆಗೆ 20 ದಿನಗಳ ಕಾಲ ನಿರಂತರವಾಗಿ ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ್ಯ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಬೇಕು. ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ರಕ್ಷಣಾ ಕಾರ್ಯಚರಣೆ ನಡೆಸಬೇಕಿದೆ ಎಂದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಕಾರ್ಯಪಡೆಯ ತಂಡವು ಕಾರ್ಯಸೂಚಿ ಅನ್ವಯ 20 ದಿನಗಳ ಕಾಲ ನಿರಂತವಾಗಿ ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ್ಯ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಲು ಕಾರ್ಯಪ್ರವೃತ್ತರಾಗಬೇಕು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಕಾರ್ಮಿಕ ನಿರೀಕ್ಷಕ ರಾಜಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page