ಬಾಲಗೌರವ” ಪ್ರಶಸ್ತಿಗೆ ಅರ್ಜಿ

by | 31/10/23 | ಸುದ್ದಿ

ಚಿತ್ರದುರ್ಗ ಅ.31:
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‍ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 6 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕøತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ಧೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ನವಂಬರ್ 18 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬಹುದು. ನಂತರ ಬಂದ ಅರ್ಜಿಗಳನ್ನು ಮತ್ತು ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಶಸ್ತಿಯ ಅರ್ಜಿ ನಮೂನೆ ಮಾನದಂಡಗಳನ್ನು ಕಚೇರಿಯ ವೆಬ್‍ಸೈಟ್ https://balavikasaacademy.karnataka.gov.xn--in-2vh3ba2fue/ ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆಎಚ್‍ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ 0836-2461666 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *