ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

by | 28/02/24 | ಸುದ್ದಿ

ಚಿತ್ರದುರ್ಗ ಫೆ.28:
ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ ನಿಯಮಗಳು “2ಸಿ”ರಲ್ಲಿ ಮಗು (1) ಕಲಂ 3ರ ನಿಬಂಧನೆಗಳು ಜಾರಿಯಲಿದ್ದು, ಈ ನಿಯಮಾನುಸಾರ ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯ.
ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1896ರ ಕರ್ನಾಟಕ ನಿಯಮಗಳು “2ಸಿ”ರಲ್ಲಿ ಒಬ್ಬ ಕಲಾವಿದನಾಗಿ ಬಾಲ ನಟ/ನಟಿಯಾಗಿ ಕೆಲಸವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ, ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು. ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು.
ಮಕ್ಕಳ ನಟನಾ ಕೆಲಸದ ಚಟುವಟಿಕೆ ನಟನೆಗೆ ಭಾಗವಹಿಸುವ ಮಕ್ಕಳ ಪೋಷಕರ, ಪಾಲಕರ ಒಪ್ಪಿಗೆ ಪತ್ರವನ್ನು ಪಡೆದು ಸಿನಿಮಾ ಅಥವಾ ಧಾರವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೆ ಆಯೋಜಕರು ಕಡ್ಡಾಯವಾಗಿ ಪ್ರದೇಶ ಕಾರ್ಯವ್ಯಾಪ್ತಿಯ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿಯೊಂದಿಗೆ ಮುಚ್ಚಳಿಕೆ ಪತ್ರವನ್ನು ಮತ್ತು ನಮೂನೆ “ಸಿ” ಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page