ಬಾಲನಹಳ್ಳಿ ಗ್ರಾಮದಲ್ಲಿ ಸಂಭ್ರಮ ಸಡಗರದ ಗ್ರಾಮೀಣ ಸೊಗಡಿನ ಸಂಕ್ರಾಂತಿ ಆಚರಣೆ

by | 15/01/24 | ಸುದ್ದಿ


ಚಳ್ಳಕೆರೆ: ತಾಲೂಕಿನಲ್ಲಿ ವರುಣನ ಆವ ಕೃಪೆಯಿಂದ ಬರಗಾಲ ಆವರಿಸಿದ್ದರೂ ರೈತರು ತಮ್ಮ ಸಂಪ್ರದಾಯ ಆಚರಣೆಗಳನ್ನು ಮರೆಯದೆ ತಾಲೂಕಿನ ಬಾಲೆನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಸೊಗಡಿನ ಸಂಕ್ರಾಂತಿ ಹಬ್ಬದ ಆಚರಣೆ ಮಾಡಿದರು.


ಮುಂಜಾನೆಯಿಂದಲೇ ಯುವಕ ಯುವತಿಯರು ತಮ್ಮ ಮನೆಗಳ ಮುಂದೆ ಚಿತ್ತಾಕರ್ಷಕ ಬಣ್ಣ ಬಣ್ಣದ ತರಹೆವಾರಿ ರಂಗೋಲಿಗಳನ್ನು ಬಿಡಿಸಿ ನೋಡುಗರ ಕಣ್ಮನ ಸೆಳೆಯುವಂತೆ ಮಾಡಿದ್ದರು.


ಚಿಕ್ಕ ಮಕ್ಕಳಿಗೆ ಸ್ತ್ರೀಯರಿಗೆ ಯುವಕ ಯುವತಿಯರಿಗೆ ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ನೀಡುವ ಮೂಲಕ ಸಂಕ್ರಾಂತಿಯ ಸುಗ್ಗಿ ಸಂಭ್ರಮ ಮನೆ ಮಾಡಿತ್ತು

ಈ ವೇಳೆ ಮಾತನಾಡಿದ ರೈತ ಮುಖಂಡ ಓಟಿ ತಿಪ್ಪೇಸ್ವಾಮಿ ಬಾಲೇನಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಸಂಕ್ರಾಂತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿಕೊಂಡು ಬರುತ್ತಿದ್ದು ಈ ಬಾರಿ ಮಳೆ ಬರದೇ ಇರುವುದರಿಂದ ಬರಗಾಲದ ಛಾಯೆ ಆವರಿಸಿ ರೈತರ ಮೊಗದಲ್ಲಿ ಮಂದಹಾಸ ಕಡಿಮೆಯಾಗಿದೆ ಆದರೂ ಸಹ ಸಂಪ್ರದಾಯಗಳನ್ನು ಬಿಡಬಾರದು ಎಂಬ ಕಾರಣಕ್ಕೆ ಇರುವ ಸಂಪನ್ಮೂಲದಲ್ಲಿ ಹಬ್ಬವನ್ನು ಆಚರಿಸುತ್ತಿದ್ದೇವೆ ಮುಂದಿನ ದಿನಗಳಲ್ಲಿ ವರುಣ ಕೃಪೆ ತೋರಿ ರೈತರ ಬಾಳನ್ನು ಹಸನಾಗಿಸುವ ನಂಬಿಕೆ ಇದೆ ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಯುವಕರು ಉದ್ಯೋಗ ಹರಸಿ ಬೇರಿ ನಗರಗಳಿಗೆ ವಲಸೆ ಹೋಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಕಡಿಮೆಯಾಗಿದೆ ಹಾಗೂ ಆಧುನಿಕ ಕೃಷಿ ಪದ್ಧತಿಗಳನ್ನು ಕೆಲ ರೈತರು ಅಳವಡಿಸಿಕೊಳ್ಳುತ್ತಿರುವುದರಿಂದ ಹಿಂದಿನ ಕಾಲದ ವೈಭವದ ಗ್ರಾಮೀಣ ಸೊಗಡಿನ ಸಂಕ್ರಾಂತಿ ಸಂಭ್ರಮ ಮರೆಯಾಗುತ್ತಿದೆ ಆದರೂ ಮುಂದಿನ ಪೀಳಿಗೆಗೆ ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಪರಿಚಯಿಸುವುದಕ್ಕಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಯುವಕರ ಕೈಯಲ್ಲಿ ಅರಳಿದ ರಂಗೋಲಿ: ಬಾಲೇನಹಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು ಈ ವೇಳೆ ಯುವತಿಯರಿಗೆ ಸ್ಪರ್ಧೆ ನೀಡಲು ಯುವಕರು ತಾವು ಕಡಿಮೆ ಇಲ್ಲ ಎಂಬಂತೆ ರಂಗೋಲಿ ಬಿಡಿಸಿ ನೋಡುಗರ ಮನ ಸೂರೆಗೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಓಟಿ ರಾಜೇಶ್ ಶಿಲ್ಪ ವೆಂಕಟೇಶ್ ಜ್ಯೋತಿ ಸತೀಶ್ ಓಸಿ ವಸಂತ್ ಕುಮಾರ್. ಜೈಶೀಲ ರೆಡ್ಡಿ ಪ್ರಶಾಂತ್ ಕುಮಾರ್ ಮಹಾಂತೇಶ್ ಹೇಮಣ್ಣ ರವಿ ಶಂಕ್ರಪ್ಪ ಭೀಮಣ್ಣ ಮಲ್ಲಾರೆಡ್ಡಿ ಮಾರುತೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page