ಚಿತ್ರದುರ್ಗ ಸೆ. 21 :
ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಿರಿಯೂರು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪೆÇೀಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ನಿμÉೀಧ ಕಾಯ್ದೆ ಕುರಿತು ಬಾಲ್ಯ ವಿವಾಹ ನಿμÉೀದಾಧಿಕಾರಿಗಳಿಗೆ ಹಿರಿಯೂರಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರ ಹಾಗೂ ರಾಷ್ಟ್ರೀಯ ಪೆÇೀಷಣ್ ಅಭಿಯಾನದಡಿ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ಪ್ರಕರಣಗಳು ವ್ಯಾಪಕವಾಗಿ ನಡೆಯುತ್ತಿದ್ದು, ಸಮಾಜಕ್ಕೆ ಇದೊಂದು ಪಿಡುಗಾಗಿದೆ. ಇಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳು ವರದಿಯಾದಾಗ ನಿಜಕ್ಕೂ ಬೇಸರವೆನಿಸುತ್ತದೆ. ಸಮಾಜದ ಎಲ್ಲಾ ರೀತಿಯ ಪಿಡುಗುಗಳನ್ನು ತೊಲಗಿಸಲು ಎಲ್ಲರೂ ಸಾಮಾಜಿಕ ಕಳಕಳಿ ಹೊಂದಿರಬೇಕು ಎಂದರು.
ಪ್ರಸಕ್ತ ದಿನಮಾನದಲ್ಲಿ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ, ಹೆಣ್ಣು ಮಕ್ಕಳು ಅಬಲೆಯರಲ್ಲ ಸಬಲೆಯರು ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಾಲ್ಯ ವಿವಾಹ ಜರುಗಲು ಅವಕಾಶ ಮಾಡಿಕೊಡಬಾರದು. ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪೆÇೀಷಕರಿಗೆ ಅರಿವು ಇರಬೇಕು, ಹೆಣ್ಣು ಮಕ್ಕಳು ಸ್ವಲ್ಪ ವಯಸ್ಸಿಗೆ ಬಂದಾಕ್ಷಣ ಮದುವೆ ಮಾಡಿಕೊಟ್ಟು ಕೈತೊಳೆದುಕೊಳ್ಳುವುದಲ್ಲ, ಮಗುವಿನ ಬಾಲ್ಯವನ್ನು ಪೆÇೀಷಕರು ಹಾಳು ಮಾಡಬಾರದು. ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸಾಧನೆಗೆ ಅವಕಾಶ ಕಲ್ಪಿಸಿಕೊಡಬೇಕು. ಅವರು ಪ್ರೌಢಾವಸ್ಥೆಗೆ ಬರುವವರೆಗೂ ಕಾಯಬೇಕು. ಆನಂತರ ಮದುವೆ ಮಾಡಬೇಕು ಎಂದು ನ್ಯಾಯಾಧೀಶರಾದ ಬಿ.ಎಸ್. ರೇಖಾ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ಆಗುವುದನ್ನು ತಡೆಗಟ್ಟಬೇಕು, ಬಾಲ್ಯವಿವಾಹಗಳು ಜರುಗುವುದು ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎತ್ತಿ ತೋರುತ್ತದೆ. ಈ ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ರೀತಿಯೇ, ಬಾಲ್ಯ ವಿವಾಹ ತಡೆಗಟ್ಟುವಲ್ಲಿಯೂ ಸಾಧನೆ ತೋರಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಕಾಳಜಿಯಿಂದ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಪೆÇೀಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ಇದೆ. ಇಡೀ ಸಮಾಜದ ಎಲ್ಲರೂ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು. ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವುದು ಎಲ್ಲರ ಕರ್ತವ್ಯವಾಗಿದೆ. ಪೆÇೀಕ್ಸೊ ಕಾಯಿದೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯೂರಿನ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಮೊಯಿನುದ್ದಿನ್, ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಶಿಲ್ಪ ತಿಮ್ಮಾಪುರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ, ಹಿರಿಯೂರು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ, ಉಪಾಧ್ಯಕ್ಷೆ ಎಚ್.ಬೀನಾರಾಣಿ, ಕಾರ್ಯದರ್ಶಿ ಜಿ.ಚಿತ್ರಲಿಂಗಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ, ಪೆÇಲೀಸ್ ಉಪ ಅಧೀಕ್ಷಕಿ ಎಸ್.ಚೈತ್ರ, ಬಾಲ ನ್ಯಾಯ ಮಂಡಳಿ ಸದಸ್ಯೆ ಸುಮನ ಎಸ್ ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಪೆÇಲೀಸ್ ತರಬೇತಿ ಕಾರ್ಯಾಲಯದ ತರಬೇತುದಾರ ಸಿ.ಜೆ.ಲೋಹಿತ್ ಉಪನ್ಯಾಸ ನೀಡಿದರು.
ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಕಾರ್ಯಗಾರ ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments