ಚಿತ್ರದುರ್ಗ ಆಗಸ್ಟ್03:
ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪೋಷಕರ ಪಾತ್ರ ತುಂಬಾ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು.
ನಗರದ ಜೆ.ಸಿ.ಆರ್ ಬಡಾವಣೆಯ ಜನಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹಗಳ ಸಂಖ್ಯೆ, ಬಾಲತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಹಿಡಿಯುವ ನಿಟ್ಟಿನಲ್ಲಿ ಕುಟುಂಬದಲ್ಲಿ ಪೋಷಕರ ಪಾತ್ರ ಬಹಳ ಪ್ರಮುಖವಾಗಿದೆ. ಮಕ್ಕಳ ಸುರಕ್ಷತೆಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ ಇವುಗಳ ವ್ಯತ್ಯಾಸ ತಿಳಿಸಿ ಹೇಳಿದರು.
ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳಾ ಸಹಾಯವಾಣಿ ಸಂಖ್ಯೆ 181 ಈ ನಂಬರಿಗೆ ಕರೆ ಮಾಡುವಂತೆ ಹಾಗೂ ಕರೆ ಮಾಡಿದವರು ಹೆಸರು ಗೌಪ್ಯವಾಗಿ ಇರುತ್ತದೆ ಎಂದು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಜಿ.ಎಂ.ರೇಖಾ, ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಭರತ್ ಹಾಗೂ ಸಹಾಯಕ ಕಾರ್ಯಕ್ರಮ ಅಧಿಕಾರಿ ಶೃತಿ ಮತ್ತು ಕಚೇರಿ ವ್ಯವಸ್ಥಾಪಕ ತಿಪ್ಪೇಶ್ ಇದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments