ಚಿತ್ರದುರ್ಗ ಅ.16: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ, ವಕೀಲರ ಸಂಘ, ಸೆಂಟ್ ಜೊಸೇಟ್ ಕಾನ್ವಂಟ್ ಇವರ ಸಹಯೋಗದಲ್ಲಿ ಸೋಮವಾರ ಸೆಂಟ್ ಜೊಸೇಪ್ ಕಾನ್ವಂಟ್ ಶಾಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟಿಸಿದರು. ಸೇಂಟ್ ಜೋಸೆಫ್ ಕಾನ್ವೆಂಟಿ ಮುಖ್ಯ ಶಿಕ್ಷಕಿ ಸಿಸ್ಟರ್ ಬಾಲ ಮೇರಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ವರಪ್ಪ ಬಾಳ್ಯ ವಿವಾಹದ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಬಾಲ್ಯ ವಿವಾಹ ವಿರುದ್ಧ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ವಕೀಲರ ಸಂಘ ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments