“ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ದಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಗಾರಕ್ಕೆ ಅರ್ಜಿ ಆಹ್ವಾನ.

by | 03/01/24 | ಉದ್ಯೋಗ


ನಾಯಕನಹಟ್ಟಿ
ಕೃಷಿ ವಿಶ್ವವಿದ್ಯಾಲಯ, ಧಾರವಾಡ ಮತ್ತು ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ (SID)–ಭಾರತೀಯ ವಿಜ್ಞಾನ ಸಂಸ್ಥೆ, ಚಳ್ಳಕೆರೆ (IISc) ಇವರ ಸಂಯುಕ್ತಾಶ್ರಯದಲ್ಲಿ “ ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ದಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಗಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ರೈತರು, ಬಾಳೆ ಬೆಳೆಗಾರರು, ಸ್ವ ಉದ್ಯೋಗದಲ್ಲಿ ಆಸಕ್ತಿ ಉಳ್ಳವರು ಮತ್ತು ಕುಶಲ ಕರ್ಮಿಗಳಿಗಾಗಿ ಆಯೋಜಿಸಲಾಗಿದೆ. ಇದು 5 ದಿನಗಳ ತರಬೇತಿ ಕಾರ್ಯಾಗಾರವಾಗಿದ್ದು ಜನವರಿ 8 ರಿಂದ ಜನವರಿ 12 ರವರೆಗೆ ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ 06-01-2024 ರ ಒಳಗೆ, ಕೆಳಗೆ ನೀಡಿರುವ ಗೂಗಲ್ ಫಾರಂ ಲಿಂಕಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಬಹುದು ಅಥವಾ ಕೆಳಗೆ ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಕೂಡ ತಮ್ಮ ಹೆಸರನ್ನು ನೋಂದಾಯಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನೋಂದಾಯಿಸಿದ ನಂತರ ಸಂಸ್ಥೆಯು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಭ್ಯರ್ಥಿಗಳಿಗೆ ತಿಳಿಸಲಾಗುವುದು. ಆಯ್ಕೆ ಆದ ಅಭ್ಯರ್ಥಿಗಳು ಕಡ್ಡಾಯವಾಗಿ ೦5 ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಬೇಕು. ಈ ತರಬೇತಿ ಕಾರ್ಯಾಗಾರದಲ್ಲಿ ಆಯ್ಕೆ ಆದ ಅಭ್ಯರ್ಥಿಗಳ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.

ಗೂಗಲ್ ಫಾರಂ ಲಿಂಕ್:https://forms.gle/2rxMK4Acn5BYaGNCA
ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ತಿಳಿಯಬಹುದು
ಗಣೇಶ್ ತೋಳಾರ್ (7349695100)
ಕೋಟೇಶ್ ಕೊರವರ (9663364234)

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page