ಬಿಜೆಪಿಪಕ್ಷದಿಂದ ಕಾಡುಗೊಲ್ಲರಿಗೆ ಯಾವುದೇಭವಿಷ್ಯವಿಲ್ಲ ಹಿರಿಯೂರು ಕ್ಷೇತ್ರದ ಮಾಜಿ ಸಚಿವರಾದ ಡಿ.ಸುಧಾಕರ್

by | 04/03/23 | ರಾಜಕೀಯ


ಹಿರಿಯೂರು :
ಬಿಜೆಪಿ ಪಕ್ಷದಿಂದ ಕಾಡುಗೊಲ್ಲರಿಗೆ ಯಾವುದೇ ರೀತಿಯ ಭವಿಷ್ಯ ಇಲ್ಲ, ನಾನು ಕಳೆದ 10ವರ್ಷ ಈ ಕ್ಷೇತ್ರದ ಶಾಸಕರಾದ ಸಂದರ್ಭದಲ್ಲಿ ಕಾಡುಗೊಲ್ಲರಿಗೆ ರಾಜಕೀಯವಾಗಿ, ಶೈಕ್ಷಣಿಕವಾಗಿ, ಹಟ್ಟಿಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ ಮತ್ತು ಕಾಡುಗೊಲ್ಲ ಮಹಿಳೆಯಾದ ಶ್ರೀಮತಿ ಶಿವರಂಜಿನಿ ಯಾದವ್ ರವರನ್ನು ಕಾಂಗ್ರೆಸ್ ಪಕ್ಷದಿಂದ ಗುರುತಿಸಿ ಹಿರಿಯೂರು ನಗರಸಭೆ ಅಧ್ಯಕ್ಷರನ್ನಾಗಿ ಮಾಡಿದ್ದೇವೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ಧರ್ಮಪುರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋಬಳಿಮಟ್ಟದ ಕಾಡುಗೊಲ್ಲರ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಅಲ್ಲದೆ ಕಾಡುಗೊಲ್ಲ ಸಮಾಜಕ್ಕೆ ಸೇರಿದ ಶ್ರೀಯುತ ಪಾಪಣ್ಣರವರನ್ನು ಕಾಂಗ್ರೆಸ್ ಪಕ್ಷದಿಂದ ನಿಲ್ಲಿಸಿ, ಗೆಲ್ಲಿಸಿ, ಜಿ.ಜೆ.ಹಳ್ಳಿ ಜಿಲ್ಲಾ ಪಂಚಾಯತ್ ಸದಸ್ಯರನ್ನಾಗಿ ಮಾಡಿದ್ದೇವೆ ಶ್ರೀಮತಿ ಗೀತಾ ನಂದಿನಿ ಗೌಡ ಹಾಗೂ ಶ್ರೀಯುತ ಮೀಸೆಮಾಲಿಂಗಪ್ಪರವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡಿದ್ದೇವೆ, ಪ್ರೇಮ್ ಕುಮಾರ್ ಅವರನ್ನು ನಗರಸಭೆ ಸದಸ್ಯರನ್ನಾಗಿ ಮಾಡಿದ್ದೇವೆ ಅಲ್ಲದೆ ಶ್ರೀಮತಿ ಜಯಮ್ಮ ಬಾಲರಾಜ್ ರವರನ್ನು. ಕಾಂಗ್ರೆಸ್ ಪಕ್ಷದಿಂದ ಎಂ.ಎಲ್.ಸಿ ಮಾಡಿದ್ದೇವೆ ಎಂದರು.
ಅಲ್ಲದೆ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಮೀಸಲಾತಿ ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಹಕರಿಸಿದ್ದೇನೆ, 3000 ಸಾವಿರ ಅಲೆಮಾರಿ ಮನೆ ನೀಡಿದ್ದೇನೆ ಕಾಡುಗೊಲ್ಲರಿಗೆ ನಗರದಲ್ಲಿ 20 ಗುಂಟೆ ಜಾಗ ಕೊಟ್ಟು ಶ್ರೀಕೃಷ್ಣಭವನವನ್ನು ಕೊಟ್ಟಿದ್ದೇನೆ, ಕಾಡುಗೊಲ್ಲರ ಆರೋಗ್ಯ ದೃಷ್ಟಿಯಿಂದ ಪ್ರತಿಹಟ್ಟಿಗೂ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಕಾಡುಗೊಲ್ಲರ ಪ್ರತಿ ಹಟ್ಟಿಗೂ ದೇವಸ್ಥಾನ ಜೀರ್ಣೋದ್ಧಾರ ಮಾಡಲು ಲಕ್ಷಾಂತರ ಅನುದಾನ ನೀಡಿದ್ದೇನೆ ಎಂಬುದಾಗಿ ಹೇಳಿದರು.
ರಾಜ್ಯ ಒಬಿಸಿ ಉಪಾಧ್ಯಕ್ಷರಾದ ಎಸ್.ಆರ್.ತಿಪ್ಪೇಸ್ವಾಮಿ ಮಾತನಾಡಿ, ಪೂರ್ಣಿಮಾ ಶ್ರೀನಿವಾಸ್ ಅವರು ನಮ್ಮಕಾಡುಗೊಲ್ಲ ಜಾತಿಯವರಲ್ಲ, ಹತ್ತು ವರ್ಷ ಅವರ ಕುಟುಂಬಕ್ಕೆ ನಮ್ಮ ಸಮಾಜದ ವೋಟ್ ಹಾಕಿದ ತಪ್ಪಿಗೆ ನಮ್ಮ ಎಸ್.ಟಿ ಮೀಸಲಾತಿಯನ್ನು ವಿರೋಧ ಮಾಡುತ್ತಿದ್ದಾರೆ, ನಮ್ಮ ಕುಲಶಾಸ್ತ್ರ ಅಧ್ಯಯನ ಅವೈಜ್ಞಾನಿಕವಾಗಿದ್ದು, ಮರು ಅಧ್ಯಯನ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಕಾಡುಗೊಲ್ಲ ನಿಗಮ ಮಂಡಳಿಯನ್ನು ವಿರೋಧ ಮಾಡಿದರು ಎಂದರಲ್ಲದೆ,
ಮುಂದಿನ ನಮ್ಮ ಮಕ್ಕಳ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಟ್ಟಿಯ ಅಭಿವೃದ್ಧಿ ಆಗಬೇಕಾದರೆ ನಮಗೆ ಮೀಸಲಾತಿಯ ಅವಶ್ಯಕತೆಯಿದೆ, ಆ ಮೀಸಲಾತಿ ವಿರೋಧ ಮಾಡುವ ಶಾಸಕಿ ನಮಗೆ ಬೇಕಾ ಮತ್ತು ನಮ್ಮ ಸಮಾಜದ ಬಡವರನ್ನು ನೋಡಿ ಕುರಿಗಾಯಿಗಳನ್ನು ನೋಡಿ ಬಡ ಮಕ್ಕಳ ವಿದ್ಯಾಭ್ಯಾಸ ವಂಚಿತರಾಗುವುದನ್ನು ನೋಡಿ ಗುಡಿಸಿಲಲ್ಲಿ ವಾಸ ಮಾಡುವುದನ್ನು ನೋಡಿ ನಿಮಗೆ ಕಣ್ಣೀರು ಬರಲಿಲ್ಲ. ಚುನಾವಣೆ ಹತ್ತಿರ ಬಂದಾಗ ನಿಮ್ಮಗೆ ಕಣ್ಣೀರು ಬರುತ್ತದೆ ಎಂಬುದಾಗಿ ಆರೋಪಿಸಿದರು.
ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ರ್ಯಾಲಿ ಮುಖಾಂತರ ಸುಧಾಕರ್ ಅವರಿಗೆ ಪಟಾಕಿಸಿಡಿಸಿ ಜೈಕಾರ ಕೂಗಿ ಸ್ವಾಗತ ಮಾಡಲಾಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು, ಕಾಡುಗೊಲ್ಲ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page