ಬೆಂಗಳೂರು ಸೆ.30: ಲಂಚ ಪಡೆಯುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಆರ್ ಒ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿ ಎಆರ್ ಒ ಚಂದ್ರ ಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು.
ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಖಾತೆ ಮಾಡಿಕೊಡಲು 60,ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿ ದ್ದ ಚಂದ್ರ ಪ್ಪ, ಮುಂಗಡವಾಗಿ 10,ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
0 Comments