ಬಿವಿ ಸಿರಿಯಣ್ಣನವರ ರಾಜಕೀಯ ಅನುಭವವನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಬಳಸಿಕೊಳ್ಳಲಿದೆ: ಶಾಸಕ ಟಿ ರಘುಮೂರ್ತಿ

by | 03/04/23 | ರಾಜಕೀಯ

ಚಳ್ಳಕೆರೆ ಏ.3 ಮಾಜಿ ಶಾಸಕ ತಿಪ್ಪೇಸ್ವಾಮಿಯವರು ಬಿಜೆಪಿ ಪಕ್ಷದಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡಿದ್ದರು ಆದರೆ ಅವರ ಪುತ್ರ ಕೆ ಟಿ ಕುಮಾರಸ್ವಾಮಿ ನನಗೆ ತಿಳಿಸದೆ ಬಿಜೆಪಿ ಪಕ್ಷವನ್ನು ತೊರೆದಿದ್ದು ನನಗೆ ಅಪಾರ ನೋವನ್ನುಂಟು ಮಾಡಿತ್ತು ಆದ್ದರಿಂದ ಸ್ಥಳೀಯರು ಶಾಸಕರಾಗಿ ಕಾರ್ಯ ನಿರ್ವಹಿಸಲಿ ಎಂಬ ಅಭಿಲಾಷೆಯಿಂದ ಹಾಗೂ ಶಾಸಕ ಟಿ ರಘುಮೂರ್ತಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಎಂದು ನಿವೃತ್ತ ಉಪನ್ಯಾಸಕ ಹಾಗೂ ಗೊಲ್ಲ ಸಮುದಾಯದ ಮುಖಂಡ ಬಿ ವಿ ಸಿರಿಯಣ್ಣ ತಿಳಿಸಿದರು.

ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಎರಡು ಬಾರಿ ಶಾಸಕರಾಗಿ ಟಿ ರಘುಮೂರ್ತಿಯವರು ತಾಲೂಕಿನ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಮತ್ತು ಗೊಲ್ಲ  ಸಮುದಾಯ ಸೇರಿದಂತೆ ಎಲ್ಲಾ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ್ದಾರೆ ಇಂತಹವರು ಶಾಸಕರಾಗಿರುವುದು ನಮ್ಮ ಚಳ್ಳಕೆರೆ ತಾಲೂಕು ಧನ್ಯವಾಗಿದೆ ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳನ್ನು ನೀಡಿ ಮತ್ತೊಮ್ಮೆ ಗೆಲ್ಲಿಸಿ ಶಾಸಕರನ್ನು ಮುಂದಿನ ಕಾಂಗ್ರೆಸ್ ಪಕ್ಷದ ಅಧಿಕಾರ ಅವಧಿಯಲ್ಲಿ ಸಚಿವರನ್ನಾಗಿ ಮಾಡೋಣ ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಟಿ ರಘುಮೂರ್ತಿ ಬಿವಿ ಸಿರಿಯಣ್ಣ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ತಮ್ಮ ಇಳಿ ವಯಸ್ಸಿನಲ್ಲಿಯೂ  ರಾಜಕೀಯ ಜೀವನವನ್ನು ತಾವು ನಂಬಿದ ಪಕ್ಷಕ್ಕೆ ನಿಷ್ಠೆಯಿಂದ ದುಡಿಯಬೇಕು ಎಂಬ ಅವರ ಹಂಬಲ ಸ್ವಾಗತವಾದುದು ಚುನಾವಣೆ ಸಂದರ್ಭದಲ್ಲಿ ಬೇರೆ ಪಕ್ಷದ ಮುಖಂಡರು ತಮ್ಮ ಅಧಿಕಾರದ ಆಸೆಗಾಗಿ ಮತ್ತೊಂದು ಪಕ್ಷವನ್ನು ಸೇರುವುದು ರಾಜಕೀಯದಲ್ಲಿ ರೂಡಿಯಲ್ಲಿದೆ ಆದರೆ ಸಿರಿಯಣ್ಣನವರು ತಮ್ಮ ಸಮುದಾಯದ ಏಳಿಗೆಗಾಗಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ ಬಿಜೆಪಿ ಪಕ್ಷದಲ್ಲಿ ತಾಲೂಕು ಅಧ್ಯಕ್ಷರಾಗಿ ತಮ್ಮ ಸೇವೆಯನ್ನು ಮಾಡಿದ್ದರು ಇಂತಹ ಮುತ್ಸದ್ದಿ ರಾಜಕಾರಣಿಯನ್ನು ಪಕ್ಷದಲ್ಲಿ ಮೂಲೆಗುಂಪು ಮಾಡದೆ ಸೂಕ್ತ ಸ್ಥಾನ ನೀಡಿ ಅವರ ಅನುಭವವನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಬಳಸಿಕೊಳ್ಳಲಿದೆ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶಿಕ್ಷಣ ಆರೋಗ್ಯ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಲ್ಲ ಸಮುದಾಯಗಳು ನನ್ನನ್ನು ಬೆಂಬಲಿಸಿದೆ ಮುಂದಿನ ಚುನಾವಣೆಯಲ್ಲಿಯೂ ಜಯಗಳಿಸಿ ತಮ್ಮ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕಾಗಿ ಕೋರಿದರು.

ಮಡಿವಾಳ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ ಶಾಸಕ ಟಿ ರಘುಮೂರ್ತಿಯವರು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸಮುದಾಯ ಭವನ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕಳೆದ ಹತ್ತು ವರ್ಷಗಳಿಂದ ತಾಲೂಕಿನಲ್ಲಿ ಸೇವೆ ಮಾಡಿದ್ದಾರೆ  ಬಡ ಹಾಗೂ ಮಧ್ಯಮ ವರ್ಗದ ಏಳಿಗೆ ಆಗಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಇಲ್ಲದಿದ್ದರೆ ರೈತಾಪಿ ವರ್ಗ ಸೇರಿದಂತೆ ಮಧ್ಯಮ ವರ್ಗದ ಜೀವನ ಮಟ್ಟ ಸುಧಾರಿಸಲು ಸಾಧ್ಯವಿಲ್ಲ ಆದ್ದರಿಂದ ತಾಲೂಕಿನ ಜನತೆ ಶಾಸಕ ಟಿ ರಘು ಮೂರ್ತಿಯವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸೇರಿದಂತೆ ಎಲ್ಲ ಸಮುದಾಯದ ಮುಖಂಡರು ಒಗ್ಗಟ್ಟಾಗಿ ಪಕ್ಷಕ್ಕೆ ಕೆಲಸ ಮಾಡಿ ಶಾಸಕರನ್ನು ಗೆಲ್ಲಿಸೋಣ ಎಂದರು. ಕಾರ್ಯಕ್ರಮದಲ್ಲಿ ಗೊಲ್ಲ ಸಮಾಜದ ಮುಖಂಡ ರವಿಕುಮಾರ್ ಎಚ್ಎಸ್ ಸೈಯದ್ ಬಿಪಿ ಪ್ರಕಾಶ್ ಮೂರ್ತಿ ಸೇರಿದಂತೆ ಹಲವರು ಮಾತನಾಡಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಟಿ ಪ್ರಭುದೇವ ಹಾಗೂ ಜಿಲ್ಲಾ ಪ್ರಚಾರ ಸಮಿತಿಯ ಉಪಾಧ್ಯಕ್ಷರನ್ನಾಗಿ ಎನ್ ಮಂಜುನಾಥ್ ರವರನ್ನು ಆಯ್ಕೆ ಮಾಡಿದ ಆದೇಶ ಪತ್ರವನ್ನು ಶಾಸಕರು ನೀಡಿದರು. ಬಿವಿ ಸಿರಿಯಣ್ಣನವರ ಅಭಿಮಾನಿಗಳು ಹಾಗೂ ಗೊಲ್ಲ ಸಮಾಜದ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವೀರಭದ್ರಯ್ಯ, ಶಶಿಧರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ನಗರಸಭೆ ಸದಸ್ಯರುಗಳಾದ ರಮೇಶ್ ಗೌಡ, ಪ್ರಕಾಶ್, ಮಲ್ಲಿಕಾರ್ಜುನ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಬಾಯಿ, ಮುಖಂಡರುಗಳಾದ ಸಿರಿಗೊಂಡಪ್ಪ, ವೀರೇಶ್ ಭಾನು, ವೀರೇಶ್, ನಾಗರಾಜ್, ಮೂಡಲಗಿರಿಯಪ್ಪ, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ದೊಡ್ಡರಂಗಪ್ಪ, ತಾಲೂಕು ಉಪ್ಪಾರ ಸಂಘದ ಯುವ ಉಪಾಧ್ಯಕ್ಷರಾದ ರವಿಕುಮಾರ್, ಮುಖಂಡರು, ಕಾರ್ಯಕರ್ತರು ಮತ್ತು ಯಾದವ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *