ಚಿತ್ರದುರ್ಗ: ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.
ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್ ಯೋಜನೆಯಡಿ ಸರ್ಕಾರಿ ಉರ್ದು ಶಾಲೆಯ 110 ಮಕ್ಕಳಿಗೆ ಹಾಗೂ ಮೌಲಾನಾ ಆಜಾದ್ ಶಾಲೆಯ 150 ಮಕ್ಕಳಿಗೆ ಸೆ. 12ರಂದು ಮಧ್ಯಾಹ್ನ ಬಿಸಿಯೂಟ(ಅನ್ನ-ಸಾಂಬಾರ್) ಜೊತೆಗೆ ಶೇಂಗಾ ಚಿಕ್ಕಿ ವಿತರಿಸಲಾಗಿತ್ತು. ಬಳಿಕ ಮಧ್ಯಾಹ್ನ 3.30ರ ನಂತರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 4 ಮಕ್ಕಳು ಹಾಗೂ ಮೌಲಾನಾ ಆಜಾದ್ ಶಾಲೆಯ ಮೂವರು ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ವಾಂತಿ ಮಾಡಿಕೊಂಡು, ಅಸ್ವಸ್ಥರಾಗಿದ್ದರು.
ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಬದಲಿಗೆ ಗುಣಮಟ್ಟವಲ್ಲದ ಶೇಂಗಾ ಚಿಕ್ಕಿ ನೀಡಿದ್ದು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಲು ಕಾರಣವಾಗಿತ್ತು. ಕರ್ತವ್ಯದಲ್ಲಿ ನಿರ್ಲಕ್ಷತೆ ಹಾಗೂ ವಹಿಸಿದ ಕೆಲಸವನ್ನು ನಿರ್ವಹಿಸಲು ಬೇಜವಾಬ್ದಾರಿತನ ತೋರಿರುವುದು ಕಂಡುಬಂದಿದ್ದು, ಈ ಬಗ್ಗೆ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ನೋಟಿಸ್‍ಗೆ ಯಾವುದೇ ಲಿಖಿತ ಉತ್ತರ ಸಲ್ಲಿಸದಿರುವುದು ಮತ್ತು ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ.

ಬಿಸಿಯೂಟದಲ್ಲಿ ಕರ್ಗವ್ಯ ಲೋಪ ಎಸಗಿ ಮುಖ್ಯಶಿಕ್ಷಕಿ ಅಮಾನತು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments