ಚಳ್ಳಕೆರೆ ಜನಧ್ವನಿ ವಾರ್ತೆ ಜ.22
ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಒತ್ತು ನೀಡುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ವಾಲ್ಮೀಕಿ ಕಲ್ಯಾಣ ಮಂಟದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕರಿಗೆ ಪ್ರಧಾನ ಮಂತ್ರಿ ಪೋಷಣ್ ಅಭಯಾನ್ ವತಿಯಿಂದ ಭಾನುವಾರ ಬಿಸಿಯೂಟ ಕಾರ್ಯಕರ್ತರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಬಿಸಿಯೂಟ ತಯಾರಿಕೆಯಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆಯಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷವಹಿಸದೆ ಅಡುವೆ ತಯಾರು ಮಾಡುವಾಗ ಕೈಗಳು ಹಾಗೂ ಅಡುಗೆ ಮಾಡುವ ಕೊಠಡಿ, ಪಾತ್ರೆಗಳನ್ನು ಸ್ವಚ್ಚತೆ ಇಡಬೇಕ. ಗ್ಯಾಸ್ ಸಿಲೆಂಡರ್ ಬಳಕೆ ಮಾಡುವಾಗ ತುಂಬಾ ಎಚ್ಚರವಹಿಸ ಬೇಕು,
ಸರಕಾರಿಶಾಲೆಗಳ ಹಾಜರಾತಿ ಹೆಚ್ಚಿಸಲು ಹಾಗೂ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಮಕ್ಕಳಿಗೆ ನೀಡಲಾಗುತ್ತಿದೆ. ಕಡಿಮೆ ವೇತನದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಬಿಇಒ ಕೆ.ಎಸ್.ಸುರೇಶ್ ಮಾತನಾಡಿ ಶಾಲೆಗೆ ಬರುವ ಆಹಾರ ಪಡಿತರಗಳ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟ ಖಾತರಿ ಪಡಿಸಬೇಕು. ಆಹಾರ ಪದಾರ್ಥಗಳು, ತರಕಾರಿಗಳನ್ನು ಬಳಸಿಕೊಳ್ಳುವ ಮುನ್ನ ಅವುಗಳ ಸ್ವಚ್ಛತೆಗೆ ಮಹತ್ವ ನೀಡಿ, ಗುಣಮಟ್ಟ ಪರಿಶೀಲಿಸಿದ ಬಳಿಕವೇ ಬಳಸಬೇಕು, ಅಡುಗೆ ಸಿಬ್ಬಂದಿ ಒಂದು ಕ್ಷಣ ಕರ್ತವ್ಯದಲ್ಲಿ ಲೋಪವೆಸಗಿದರೆ, ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರುವುದರಿಂದ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆಯೋಗ್ಯ ಇಲಾಖೆ ತಿಪ್ಪೇಸ್ವಾಮಿ ಅಡುಗೆ ತಯಾರಿಕ ಸಿಬ್ಬಂದಿಗಳು ತಮ್ಮ ಕೈಗಳನ್ನು ಯಾವ ರೀತಿ ಸ್ವಚ್ಚತೆ ಮಾಡಿಕೊಳ್ಳ ಬೇಕು ಎಂದು ತರಬೇತಿ ನೀಡಿದರೆ. ಅಗ್ನಿಶಾಮಕ ದಳದ ಅಧಿಕಾರಿ ಅಗ್ನಿ ದುರಂತಗಳು ಸಂಭವಿಸದAತೆ ಮತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕಾರ್ಯಗಳ ಬಗ್ಗೆ ಪ್ರತ್ಯಕ್ಷತೆ ತೋರಿಸುವ ಮೂಲಕ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಮೀ ಸಂಘಸನೆಯ ಮುಖಂಡರಾದ ಸಿ.ವೈ.ಶಿವರುದ್ರಪ್ಪ, ದೊಡ್ಡ ಉಳ್ಳಾರ್ತಿ ಕರಿಯಣ್ಣ, ಹೆಚ್.ಎಸ್.ಸೈಯಾದ್, ಅಕ್ಷರದಾಸೋಹ ಸಯಾಯಕ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ, ಸದಸ್ಯರಾದ ರಮೇಶ್‌ಗೌಡ, ಇಂದ್ರೇಶ್.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ , ಕಾರ್ಯದರ್ಶಿ ಎಸ್.ಟಿ,ತಿಪ್ಪೇಸ್ವಾಮಿ ಇತರರಿದ್ದರು.
ಬಿಸಿಯೂಟ ತಯಾರಿಕೆಯಲ್ಲಿ ಅಡುಗೆ ಸಿಬ್ಬಂದಿ ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಒತ್ತು ನೀಡುವಂತೆ ಶಾಸಕ ಟಿ.ರಘುಮೂರ್ತಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments