ಬೆಂಗಳೂರು ಅ.29.ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಹಳೆಯ ವಿದ್ಯಾರ್ಥಿ ಜವನದ ನೆನಪುಗಳನ್ನು ಹಳೆಯ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆದ ದಾವಣಗೆರೆಯ ಯೂನಿವರ್ಸಿಟಿ ಬಿಡಿಟಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಆಯೋಜಿಸಿದ್ದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್, ಕುಲಸಚಿವರಾದ ಡಾ.ಬಿ.ಇ.ರಂಗಸ್ವಾಮಿ, ಇಸ್ರೋದ ಡಾ.ಸಿ.ಹೆಚ್.ಶ್ರೀನಿವಾಸ ರಾವ್, ಎಂ.ಹೇಮಲತಾ, ಕೆ.ಲಲಿತಾ, ಹೆಚ್ ಎಎಲ್ ಏರೋಸ್ಪೇಸ್ ವಿಭಾಗದ ಹಿರಿಯ ವ್ಯವಸ್ಥಾಪಕ ಕ್ರಾಂತಿ ಕುಮಾರ್ ಗಂಧಮ್, ಕಾಲೇಜು ಪ್ರಾಂಶುಪಾಲ ಡಾ.ಡಿ.ಪಿ.ನಾಗರಾಜಪ್ಪ ಇತರರಿದ್ದರಿದ್ದರು.
ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ. ಟಿ.ರಘುಮೂರ್ತಿಯವರಿಗೆ ಸನ್ಮಾನಿಸಿ ಗೌರವಿಸಿದರು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments