ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ

by | 29/11/23 | ಕರ್ನಾಟಕ

ಬೆಂಗಳೂರು ನ.29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು.

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ.

ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ.

ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ.

#ಹಾವೇರಿ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page