ಬೆಳಗಾವಿ ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ.

by | 13/12/23 | ಕರ್ನಾಟಕ


ಬೆಳಗಾವಿ, ಸುವರ್ಣಸೌಧ, ಡಿ 13 : ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು, ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು ಎಂದು ತಿಳಿಸಿದ ಸಚಿವರು, ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತç ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತç ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page