ಚಳ್ಳಕೆರೆ ಅ.4.ಚಳ್ಳಕೆರೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸಾಣೀಕೆರೆ ಹಾಗೂ ಬೆಳಗೆರೆ ಗ್ರಾಪಂ ಕೇಂದ್ರಗಳಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಿಯಾಗುವಂತೆ ತಾಪಂ ಇಒ ಹೊನ್ನಯ್ಯ ತಿಳಿಸಿದ್ದಾರೆ.
ದಿ:5-010-2023 ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆಯನ್ನು ಕಸಬಾ ಹೋಬಳಿ ವ್ಯಾಪ್ತಿಯ ಸಾಣೀಕೆರೆ ಗ್ರಾಮದ ಪೋಲಿಸ್ ಠಾಣೆ ಪಕ್ಕದ ಆವರದಲ್ಲಿ 10-30 ಸಮಕ್ಕೆ ಹಾಗೂ ಬೆಳೆಗೆರೆ ಗ್ರಾಮದಲ್ಲಿ ಗ್ರಾಪಂ ಕಚೇರಿ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಸರಿಯಾಗಿ ಸಾರ್ವಜನಿಕ ಕುಂದು ಕೊರತೆಗಳ ನಿವಾರಣೆಗಾಗಿ
ಸಭೆಯನ್ನು ಆಯೋಜಿಸಲಾಗಿರುತ್ತದೆ. ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ
ಮಾಹಿತಿಯೊಂದಿಗೆ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಪ್ರತಿಯೊಬ್ಬ ಅಧಿಕಾರಿಗಳು ಖುದ್ದಾಗಿ ಹಾಜರಾಗಲು ಕೋರಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments