ಬೆಳೆವಿಮೆ ಪರಿಹಾರ ವಿತರಣೆ ಅವ್ಯವಹಾರ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಿದ : ಶಾಸಕ ಟಿ.ರಘುಮೂರ್ತಿ

by | 06/12/23 | ತನಿಖಾ ವರದಿ

ಬೆಳಗಾವಿ ಸುವರ್ಣವಿಧಾನಸೌಧ ಡಿ.06: ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಉಂಟಾದ ಅವ್ಯವಹಾರದ ಬಗ್ಗೆ ಶಾಸಕ ಟಿ.ರಘುಮೂರ್ತಿ ಅವರು ಬೆಳಗಾವಿಯ ಚಳಿಗಾಲದ ವಿಧಾನಸಭಾ ಅಧಿವೇಶನದಲ್ಲಿ ಕೃಷಿ ಸಚಿವರನ್ನು ಪ್ರಶ್ನಿಸಿದ್ದಾರೆ.

ಬುಧವಾರ ಶಾಸಕರ 175ನೇ ಚುಕ್ಕೇ ಗುರುತಲ್ಲದ ಪ್ರಶ್ನೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಲಿಖಿತವಾಗಿ ಉತ್ತರ ನೀಡಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಪಿ.ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಾಯಿತ ಖಾತೆದಾರರಿಗೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ರೈತರು ದೂರು ನೀಡಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಚಳ್ಳಕೆರೆ ತಾಲ್ಲೂಕಿನಲ್ಲಿ 68717 ಹೆಕ್ಟೇರ್ ಪ್ರದೇಶದ 14 ವಿವಿಧ ಅಧಿಸೂಚಿತ ಬೆಳೆಗೆ ಒಟ್ಟು 44852 ಬೆಳೆವಿಮೆ ನೊಂದಣಿ ಪ್ರಸ್ತಾವನೆಗಳು ನೋಂದಣಿಯಾಗಿವೆ. ಇದಲ್ಲದೆ ತಾಲ್ಲೂಕಿನ ಬೀಳು ಭೂಮಿ ಹಾಗೂ ನೋಂದಾಯಿತ ಬೆಳೆಯಲ್ಲದ ಬೇರೆ ಬೆಳೆಗಳಿಗೆ 80 ಪ್ರಕರಣಗಳಲ್ಲಿ ರೂ.67 ಲಕ್ಷಕ್ಕೂ ಹೆಚ್ಚು ಬೆಳೆವಿಮೆ ಹಣ ದುರುಪಯೋಗವಾಗಿದೆ. ಮೂಲ ಖಾತೆದಾರರ ಬದಲಿಗೆ ಬೇರೆಯೊಬ್ಬರನ್ನು ನೋಂದಣಿ ಮಾಡಿಸಿದ 2 ಪ್ರಕರಣಗಳಲ್ಲಿ ರೂ.1.90 ಲಕ್ಷ ಬೆಳೆ ವಿಮೆಹಣ ಪಡೆದ ವಂಚಿಸಲಾಗಿದೆ ಈ ಕುರಿತು ಜಿಲ್ಲಾಧಿಕಾರಿ ತನಿಖಾ ವರದಿ ನೀಡಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page