ಚಿತ್ರದುರ್ಗ ಅ.30 ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಬ್ಬರ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್ ಮನೆ ಮೇಲೆ ದಾಳಿ ನಡೆಸಿದೆ. ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ನಲ್ಲಿರುವ ಮನೆಯಲ್ಲಿ ಹಾಗೂ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ನಲ್ಲೂ ಶೋಧ ನಡೆಸಲಾಗಿದೆ. ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ AD ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಿದ್ದು, ಬೆಳಗ್ಗೆಯಿಂದಲೂ ಪರಿಶೀಲನೆ ಮಾಡಿದೆ. ಆದಾಯ ಮೀರಿ ಸಂಪತ್ತು ಗಳಿಕೆ ಆರೋಪದಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಪರಿಶೀಲನೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments