ಭಗೀರಥ ಮಹರ್ಷಿ ತಪ್ಪಸ್ಸಿನ ಮೂಲಕ ಗಂಗೆಯನ್ನ ಧರೆಗಿಳಿಸಿದ, ಜೀವಸಂಕುಲದ ಉದ್ದಾರಕ್ಕೆ ಶ್ರಮಿಸಿದ ಮಹಾತಪಸ್ವಿ:ಪುರುಷೋತ್ತಾಮಾನಂದಪುರಿ ಮಹಾಸ್ವಾಮಿ

by | 15/06/24 | ಸುದ್ದಿ


ಹಿರಿಯೂರು:
ಭಗೀರಥ ಮಹರ್ಷಿ ತಪ್ಪಸ್ಸಿನ ಮೂಲಕ ಗಂಗೆಯನ್ನು ಧರೆಗಿಳಿಸಿದ ಹಾಗೂ ಜೀವ ಸಂಕುಲದ ಉದ್ದಾರಕ್ಕೆ ಶ್ರಮಿಸಿದ ಮಹಾತಪಸ್ವಿಯಾಗಿದ್ದು,ಸಾಧನೆಗೆ ಅವರ ಪರಿಶ್ರಮವೇ ಸ್ಪೂರ್ತಿಯಾಗಬೇಕು ಎಂಬುದಾಗಿ ಹೊಸದುರ್ಗ ಭಗೀರಥ ಪೀಠದ ಡಾ. ಪುರುಷೋತ್ತಾಮಾನಂದ ಪುರಿ ಮಹಾಸ್ವಾಮಿ ತಿಳಿಸಿದ್ದಾರೆ.
ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಶುಕ್ರವಾರ ಉಪ್ಪಾರ ಸಮುದಾಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಭಗೀರಥ ಜಯಂತ್ಯೋತ್ಸವ ಹಾಗೂ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಅವರು ಮಾತನಾಡಿದರು.
ಭೀಕರ ಬರಗಾಲದಿಂದ ತತ್ತರಿಸಿದ್ದ ಜನತೆಗೆ ಈ ವರ್ಷದ ಆರಂಭದಲ್ಲಿಯೇ ದೇವರ ಹಾಗೂ ಭಗೀರಥ ಕೃಪೆಯಿಂದ ಉತ್ತಮ ಮಳೆಯಾಗಿದ್ದು ಜನತೆಯಲ್ಲಿ ಸಮಾಧಾನ ತಂದಿದೆ. ಜನರು ಧಾರ್ಮಿಕವಾಗಿ ಸಂಸ್ಕಾರವಂತರಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ಸನ್ಮಾರ್ಗದಲ್ಲಿ ಮುನ್ನಡೆಸಬೇಕು. ಸಮುದಾಯದ ಅಭಿವೃದ್ಧಿಗೆ ಸಮರ್ಪಕ ಅನುದಾನ ಸಿಗುವಂತಾಗಬೇಕು.ಆದಷ್ಟು ಬೇಗ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸುವ ಕೆಲಸವಾಗಬೇಕಾಗಿದೆ ಎಂಬುದಾಗಿ ಅವರು ತಿಳಿಸಿದರು.
ಮಾಜಿ ಸಚಿವ ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿ ಉಪ್ಪಾರ ಸಮುದಾಯವು ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವಾಗಿದೆ. ನಾನು ಸಮಾಜದಿಂದ ಭಗೀರಥ ಸಮಾಜದಿಂದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದುಅನೇಕ ಸೌಲಭ್ಯ ಒದಗಿಸಿದ್ದೇನೆ ಎಂದರಲ್ಲದೆ,
ನಿಗಮ ಮಂಡಳಿ ಸ್ಥಾಪನೆ, ಭಗೀರಥ ಜಯಂತಿ ಆಚರಣೆ ಜೊತೆಗೆ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದೇನೆ . ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲುಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂಬುದಾಗಿ ಅವರು ತಿಳಿಸಿದರು.
ಉಪ್ಪಾರ ಯುವಕ ಸಂಘದ ಕನಕದಾಸ್ ಮಾತನಾಡಿ ನಮ್ಮ ಉಪ್ಪಾರ ಸಮುದಾಯ ಅತ್ಯಂತ ಹಿಂದುಳಿದ ಸಮಾಜ. ಯಾವುದೇ ರಾಜಕೀಯ ಸ್ಥಾನಮಾನವಿಲ್ಲ ಆದ್ದರಿಂದ ಕಾಂಗ್ರೆಸ್ ಸರ್ಕಾರ ನಮ್ಮ ಸಮಾಜಕ್ಕೆ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಉಪ್ಪಾರ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು. ವೆಂಕೋಬ, ತಾಲ್ಲೂಕು ಅಧ್ಯಕ್ಷ ಆಲೂರು ರಾಮಣ್ಣ, ಬಿಜೆಪಿ ಮುಖಂಡ ಎನ್. ಆರ್. ಲಕ್ಷ್ಮಿಕಾಂತ್ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಕ್ಕ, ಜಿಲ್ಲಾಧ್ಯಕ್ಷ ವೀರೇಶ್, ಮೂರ್ತಿ, ಮುಖಂಡರಾದ ಬಳ್ಳಾರಿ ಯರ್ರಿಸ್ವಾಮಿ, ಮೈಸೂರು ಯೋಗೇಶ್, ನೀಲಕಂಠಪ್ಪ, ಚಂದ್ರಶೇಖರ್, ಮೂಡ್ಲಪ್ಪ, ಬಸವರಾಜ, ಸುನಿಲ್ ಕುಮಾರ್, ಮಂಜುನಾಥ್, ಮಹೇಶ್, ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page