ಚಿತ್ರದುರ್ಗ, ಮಾ.15
ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಹುದ್ದೆಯ ಸ್ವತಂತ್ರ ಪ್ರಭಾರವನ್ನು ಕೆ.ಎಂ. ಶಿವಪ್ರಕಾಶ್ ಶುಕ್ರವಾರ ಭದ್ರಾ ಮೇಲ್ದಂಡೆ ಯೋಜನಾ ವಲಯದ ಕಚೇರಿಯಲ್ಲಿ ವಹಿಸಿಕೊಂಡರು.
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನಾ ವೃತ್ತದಲ್ಲಿ ಅಧೀಕ್ಷಕ ಅಭಿಯಂತರರಾಗಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಮುಖ್ಯ ಇಂಜಿನಿಯರ್ ಆಗಿ ಹೆಚ್ಚುವರಿ ಪ್ರಭಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಎಂ. ಶಿವಪ್ರಕಾಶ್ ಅವರಿಗೆ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಹುದ್ದೆಯ ಸ್ವತಂತ್ರ ಪ್ರಭಾರ ವಹಿಸಿ ಅಧಿಸೂಚನೆ ಹೊರಡಿಸಿದ್ದು, ಇದರನ್ವಯ ಕೆ.ಎಂ. ಶಿವಪ್ರಕಾಶ್ ಅವರು ಶುಕ್ರವಾರದಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments