ಭರಮಗಿರಿ ಕೆರೆಗೆ ವಾಣಿವಿಲಾಸದಿಂದ ನೀರು ಹರಿಸದಿದ್ದರೆ ಲೋಕಸಭಾಚುನಾವಣೆಯನ್ನು ಬಹಿಷ್ಕಾರಿಸಲಾಗುವುದು ಭರಮಗಿರಿಯ ಕೆರೆಅಚ್ಚುಕಟ್ಟು ಪ್ರದೇಶದ ರೈತರ ಎಚ್ಚರಿಕೆ

by | 26/03/24 | ಜನಧ್ವನಿ


ಹಿರಿಯೂರು:
ತಾಲ್ಲೂಕಿನ ಭರಮಗಿರಿ ಗ್ರಾಮದ ಕೆರೆಗೆ ವಾಣಿವಿಲಾಸ ಜಲಾಶಯದ ನೀರು ಹರಿಸದೇ ಹೋದರೆ ಮುಂದಿನ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆ ಬಹಿಷ್ಕರಿಸುವುದು ಖಚಿತ ಎಂಬುದಾಗಿ ಭರಮಗಿರಿ ಗ್ರಾಮದ ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಸ್ಪಷ್ಟಪಡಿಸಿದ್ದಾರೆ.
ಲೋಕಸಭೆ ಚುನಾವಣೆ ಬಹಿಷ್ಕರಿಸುವ ಮಾಹಿತಿ ತಿಳಿದು ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಹಾಯಕ ಚುನಾವಣಾಧಿಕಾರಿ ಶಿವೇಗೌಡ, ತಹಶೀಲ್ದಾರ್ ರಾಜೇಶ್ ಕುಮಾರ್, ವಿಶ್ವೇಶ್ವರಯ್ಯ ನೀರಾವರಿ ನಿಗಮದ ಎಇಇ ವಿಜಯ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ನೇತೃತ್ವದ ತಂಡ ನಡೆಸಿದ ಸಂಧಾನ ಯತ್ನಕ್ಕೆ ರೈತರು ಬಗ್ಗಲಿಲ್ಲ.
ವಾಣಿವಿಲಾಸ ಅಣೆಕಟ್ಟೆಯ ನೀರನ್ನು 100 ಕಿ.ಮೀ. ದೂರದಲ್ಲಿರುವ ಚಳ್ಳಕೆರೆ ತಾಲ್ಲೂಕಿನ ಹಳ್ಳಿಗಳಿಗೆ ಒಯ್ಯಲು ಸಾಧ್ಯವಿದೆ. ವಾಣಿವಿಲಾಸ ಸಾಗರದ ಬುಡದಲ್ಲಿ ಕೇವಲ 3ಕಿ.ಮೀ. ದೂರದಲ್ಲಿರುವ ಭರಮಗಿರಿ ಕೆರೆಗೆ ತರಲು ಸಾಧ್ಯವಿಲ್ಲವೇ? ಕೆರೆ ತುಂಬಿದರೆ ವಾಣಿವಿಲಾಸಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಳವಾರಹಟ್ಟಿ, ಕಕ್ಕಯ್ಯನಹಟ್ಟಿ, ಕುಂಟಪ್ಪನಹಟ್ಟಿ, ಬಳಗಟ್ಟ, ಭರಮಗಿರಿ, ಅಗಳೇರಹಟ್ಟಿ, ಕುರುಬರಹಳ್ಳಿ, ಕೂನಿಕೆರೆ ಪಂಚಾಯ್ತಿ ವ್ಯಾಪ್ತಿಯ ಬೀರೇನಹಳ್ಳಿ, ಎ.ವಿ. ಕೊಟ್ಟಿಗೆ, ಗುಡಿಹಳ್ಳಿ ಗ್ರಾಮದವರೆಗೆ ಅಂತರ್ಜಲ ಹೆಚ್ಚುತ್ತದೆ ಎಂಬುದು ಗ್ರಾಮಸ್ಥರ ಆಶಯವಾಗಿದೆ.
ಕಳೆದ 2022ರಲ್ಲಿ ವಾಣಿವಿಲಾಸ ಜಲಾಶಯ ಕೋಡಿ ಹರಿದಿತ್ತು. ಆದರೆ ಭರಮಗಿರಿ ಕೆರೆಗೆ ನೀರು ಬಂದಿರಲಿಲ್ಲ. ಕೆರೆಯ ಮೇಲ್ಬಾಗಲ್ಲಿರುವ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ, ಮಾದಿಹಳ್ಳಿ ಭಾಗದಲ್ಲಿ ಹತ್ತಾರು ಚೆಕ್ ಡ್ಯಾಂಗಳನ್ನು ನಿರ್ಮಿಸಿರುವ ಕಾರಣ ಕೆರೆಗೆ ನೀರು ಬರದಂತಾಗಿದೆ. 25 ವರ್ಷಗಳಿಂದ ಕೆರೆ ಭರ್ತಿಯಾಗಿಲ್ಲ ಎಂಬುದಾಗಿ ನೂರಾರು ರೈತರು ಅಧಿಕಾರಿಗಳ ಗಮನ ಸೆಳೆದರು.
ಪ್ರಾದೇಶಿಕ ಆಯುಕ್ತರು ಚಳ್ಳಕೆರೆ ತಾಲ್ಲೂಕಿಗೆ 0.25 ಟಿ ಎಂಸಿ ಅಡಿ ನೀರು ಹರಿಸುವಂತೆ ಆದೇಶ ಹೊರಡಿಸಿದ್ದು , ಅವರ ಆದೇಶದಂತೆ ವೇದಾವತಿ ನದಿಯ ಮೂಲಕ ನೀರು ಬಿಡಲಾಗುತ್ತಿದೆ. ಅದೇ ರೀತಿ ಚುನಾವಣೆ ಒಳಗೆ ಪೈಪ್ ಲೈನ್ ಮೂಲಕ ಕೆರೆಗೆ ನೀರು ಹರಿಸಲು ಆಯುಕ್ತರು ಆದೇಶ ಮಾಡಲಿ ಎಂಬುದಾಗಿ ಅಚ್ಚುಕಟ್ಟು ರೈತರು ಪಟ್ಟು ಹಿಡಿದರು.
ಸುಮಾರು 25-30 ವರ್ಷಗಳಿಂದ ಕೆರೆಗೆ ವಾಣಿವಿಲಾಸ ಸಾಗರದ ನೀರು ಹರಿಸುವಂತೆ ಗ್ರಾಮದ ಜನರು ಕೇಳುತ್ತಾ ಬಂದಿದ್ದೇವೆ. ಈ ಪ್ರದೇಶದಲ್ಲಿ ಕೃಷಿಕರು ತಮ್ಮ ಜಮೀನುಗಳಲ್ಲಿ ಸಾವಿರ ಅಡಿ ಕೊಳವೆ ಬಾವಿ ಕೊರೆಸಿದರೂ ನೀರುಸಿಗುತ್ತಿಲ್ಲ. ಇದರಿಂದಾಗಿ ನೂರಾರು ಎಕರೆ ಅಡಿಕೆ, ತೆಂಗು, ಬಾಳೆ, ದಾಳಿಂಬೆ ತೋಟಗಳು ಒಣಗಿ ಹೋಗಿವೆ ಎಂಬುದಾಗಿ ಬೇಸರ ವ್ಯಕ್ತಪಡಿಸಿದರು.
ಇದು ನಮ್ಮ ಭರಮಗಿರಿ ಗ್ರಾಮದ ಜನರ, ಜೀವನದ ಉಳಿವು ಅಳಿವಿನ ಪ್ರಶ್ನೆಯಾಗಿದ್ದು ಇದು ನಮ್ಮ ಈ ಭಾಗದ ಜನರ ನಿರ್ಣಾಯಕ ಹೋರಾಟವಾಗಿದೆ ಎಂದರಲ್ಲದೆ ವಾಣಿವಿಲಾಸದ ಸಾಗರದಿಂದ ನಮ್ಮ ಭರಮಗಿರಿ ಕೆರೆಗೆ ಪೈಪ್ ಲೈನ್ ಮೂಲಕ ನೀರುಹರಿಸುವವರೆಗೆ ನಮ್ಮ ಹೋರಾಟ ನಿಲ್ಲದು ಎಂಬುದಾಗಿ ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗಂಗಮ್ಮ ಉಮೇಶ್, ಬಿ.ಕೆ.ಲೋಕೇಶ್, ಜಯರಾಮಯ್ಯ, ಕಾಂತರಾಜ್, ಬಿ.ಎಸ್. ಕೆಂಚಪ್ಪ, ಯೋಗೇಶ್ವರ್, ಕಕ್ಕಯ್ಯನಹಟ್ಟಿ ಚಂದ್ರಪ್ಪ, ಕೆ.ಆರ್. ತಿಪ್ಪೇಸ್ವಾಮಿ, ಕಾಂತಣ್ಣ, ವೆಂಕಟಾಚಲಯ್ಯ, ಅಗಳೇರಹಟ್ಟಿ ನಾಗರಾಜ್, ಕುರುಬರಹಳ್ಳಿ ರಘುನಾಯ್ಕ್ ಕೆರೆ ಸಮಿತಿ ಅಧ್ಯಕ್ಷರಾದ ವೀರಭದ್ರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page