ಭಾರತದಲ್ಲಿ ಪ್ರಜಾಪ್ರಭುತ್ವ ಸರ್ಕಾರ ರಚನೆಯಾದರೂ ನಮ್ಮಹಕ್ಕುಗಳನ್ನು ಹೋರಾಟ ಚಳುವಳಿಯ ಮೂಲಕ ಪಡೆಯಬೇಕಾಗುತ್ತದೆ :ಕಾರ್ಯಾಧ್ಯಕ್ಷರಾದ ಸಿದ್ದವೀರಪ್ಪ

by | 05/07/24 | ಪ್ರತಿಭಟನೆ


ಹಿರಿಯೂರು:
ನಮ್ಮ ದೇಶದಲ್ಲಿ ಆಳುವ ಸರ್ಕಾರಗಳು ಸ್ವತಂತ್ರ ಬಂದು 76 ವರ್ಷ ಕಳೆದರೂ, ಪ್ರಜಾಪ್ರಭುತ್ವ ಸರ್ಕಾರಗಳು ರಚನೆಯಾದರೂ ಹೋರಾಟ ಚಳುವಳಿ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂಬುದಾಗಿ ಹೊಳಲ್ಕೆರೆ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಸಿದ್ದವೀರಪ್ಪ ತಿಳಿಸಿದರು.
ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ 17ನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಎಲ್ಲಿಂದಲೋ ಬಂದವರು ಹಣ ಚೆಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಹಣ ಮಾಡಿಕೊಳ್ಳುವುದು ಅವರ ಉದ್ದೇಶವಾಗಿರುತ್ತದೆ, ನಮ್ಮ ರೈತರಿಗೆ ಬೇಕಾದ ಸೌಲಭ್ಯಗಳನ್ನು ಪಡೆಯಲು ರೈತರ ಮಕ್ಕಳನ್ನು ಆರಿಸಿ ಕಳಿಸಿದರೆ ರೈತರಿಗೆ ಮತ್ತು ಗ್ರಾಮೀಣ ಮಕ್ಕಳಿಗೆ ಗ್ರಾಮಗಳಿಗೆ ಪೂರಕವಾದ ಕೆಲಸವನ್ನು ಮಾಡುತ್ತಾರೆ ಎಂದರಲ್ಲದೆ,
ಸರ್ಕಾರಗಳು ರೈತರ ಬಗ್ಗೆ ಸ್ವಲ್ಪನೂ ಕಾಳಜಿ ಇಲ್ಲದೆ ಕಾರ್ಪೊರೇಟ್ ಕಂಪನಿಗಳ ಪರವಾಗಿ ಇವೆ. ಈ ಭಾಗದಲ್ಲಿ ಅನೇಕ ಹೋಬಳಿಯ ಜನಗಳಿಗೆ ನೀರು ಕೊಟ್ಟರೆ ಸಾಕು ಅವನು ಕಳೆದ ಅವರ ಜೀವನ ಸುಧಾರಿಸುತ್ತದೆ ಗಾಯತ್ರಿ ಜಲಾಶಯವನ್ನು ನಂಬಿಕೊಂಡು ಅನೇಕ ಅಡಿಕೆ ತೋಟಗಳನ್ನು ಬೆಳೆಸಿದ್ದು, ಈಗ ಆಗುವ ಒಣಗುವ ಸ್ಥಿತಿಯಲ್ಲಿ ಇದೆ ಎಂದರಲ್ಲದೆ,
ಆದ್ದರಿಂದ ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ಸ್ಥಳಕ್ಕೆ ಬಂದು ಸಮಸ್ಯೆಯನ್ನ ಬಗೆಹರಿಸದಿದ್ದರೆ ಇಡೀ ಜಿಲ್ಲೆಯ ಎಲ್ಲಾ ತಾಲ್ಲೂಕು ರೈತ ಸಂಘಟನೆಗಳ ಬೆಂಬಲದೊಂದಿಗೆ ಚಳುವಳಿ ಎಂದು ಮಾಡಬೇಕಾಗಿರುತ್ತದೆ ಎಂಬುದಾಗಿ ಅವರು ತಿಳಿಸಿದರು.
ಈ ಚಳುವಳಿಯಲ್ಲಿ ಹೆಚ್ಚಿಗೆ ಮಹಿಳೆಯರು ಮತ್ತು ಯುವಕರು ತೊಡಗಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಗ್ರಾಮಸಭೆಗಳನ್ನು ಮಾಡುವ ಮೂಲಕ ಜನರಲ್ಲಿಜಾಗೃತಿ ಮೂಡಿಸಿ ಸಾಗರೋಪಾದಿಯಾಗಿ ಜನರು ಬಂದಿದ್ದರು ಎಂಬುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷರಾದ ಕೆ.ಟಿ. ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ಎಂ.ಆರ್.ವೀರಣ್ಣ, ನಟರಾಜ್ ಮಾತನಾಡಿದರು. ಈ ಪ್ರತಿಭಟನೆಯಲ್ಲಿ ಹೊಳಲ್ಕೆರೆಯಿಂದ ಆಗಮಿಸಿದ ಬಸವರಾಜಪ್ಪ, ಪರಮೇಶ್ವರಪ್ಪ ಕೊಡಗನಹಳ್ಳಿ ಮತ್ತಿಘಟ್ಟ ಇಳಿಕೆನಲ್ಲಿ ರಾಜಣ್ಣ, ಪ್ರಶಾಂತ್, ಪ್ರಸನ್ನ, ಕನ್ಯಪ್ಪ, ತಿಮ್ಮಾರೆಡ್ಡಿ, ಈರಣ್ಣ, ಶಿವಣ್ಣ, ರಾಮಕೃಷ್ಣ, ಕುಮಾರ, ಬಾಲಕೃಷ್ಣ, ಚಿತ್ರಲಿಂಗಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page