ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ : ತಹಶೀಲ್ದಾರರಾದ ರಾಜೇಶ್ ಕುಮಾರ್

by | 26/01/24 | ಸುದ್ದಿ


ಹಿರಿಯೂರು:
ನಮ್ಮ ದೇಶಕ್ಕೆ 1947 ಆಗಸ್ಟ್ 15 ರಂದು ಸ್ವಾತಂತ್ರ್ಯ ಲಭಿಸಿದ ನಂತರ ದೇಶದಲ್ಲಿ ನಮ್ಮದೇ ಆದ ಗಣತಂತ್ರ ವ್ಯವಸ್ಥೆಯನ್ನು ಸಂವಿಧಾನಾತ್ಮಕವಾಗಿ 1950 ರ ಜನವರಿ 26ರಂದು ಅಳವಡಿಸಿಕೊಳ್ಳಲಾಯಿತು, ಅಂದಿನಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ “ಏಕ ಸಂವಿಧಾನದ ಬೃಹತ್ ಗಣತಂತ್ರ” ರಾಷ್ಟ್ರವಾಗಿ ಈ ಭಾರತದೇಶದ ಉದಯವಾಯಿತು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ರಾಜೇಶ್ ಕುಮಾರ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 75 ನೇ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಅನೇಕ ಜಾತಿ ಮತ ಧರ್ಮ ಹಾಗೂ ಭಾಷೆಗಳ ಜನರಿದ್ದರೂ ಸಹ ಇಲ್ಲಿ ಮತೀಯ ಭಾವ, ಪ್ರತ್ಯೇಕತೆ ಹಾಗೂ ಮೂಲಭೂತ ವಾದಗಳಿಗೆ ಅವಕಾಶವಿಲ್ಲ, ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ, ದೇಶದ ಜನತೆಗೆ ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಭಾವನೆ ಒದಗಿಸುವುದು ನಮ್ಮ ಸರ್ಕಾರಗಳ ಗುರಿಯಾಗಿದೆ ಎಂಬುದಾಗಿ ಹೇಳಿದರು.
ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಘನ ಸರ್ಕಾರವು ತಾಲ್ಲೂಕನ್ನು ಬರಬೇಡಿತ ಪ್ರದೇಶವೆಂದು ಪರಿಗಣಿಸಿದ್ದು, ತಾಲೂಕು ವ್ಯಾಪ್ತಿಯಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗೆ ಹಾನಿಗೆ ಬೆಳೆ ಪರಿಹಾರ ವಿತರಣೆಯನ್ನು ನೂತನ ಫ್ರೂಟ್ಸ್ ತಂತ್ರಾಂಶದ ಮೂಲಕ ನೇರವಾಗಿ ರೈತರ ಖಾತೆಗೆ ಜಮಾವಣೆ ಮಾಡಲಾಗುತ್ತಿದೆ ಎಂದರಲ್ಲದೆ,
ಬೆಳೆವಿಮೆ ಪಾವತಿಸಿದ ಬೆಳೆಗಳಿಗೆ ಬೆಳೆವಿಮೆ ಪರಿಹಾರ ವಿತರಣೆ ರೈತರ ಬ್ಯಾಂಕ್ ಖಾತೆಗೆ ಸಂದಾಯವಾಗುತ್ತಿದೆ, ಜಾನುವಾರುಗಳ ಸಂರಕ್ಷಣೆಗಾಗಿ ಘನ ಸರ್ಕಾರವು ಗೋಶಾಲೆಗಳನ್ನು ಪ್ರಾರಂಭಿಸುವ ಕುರಿತು ನಮ್ಮ ಕರ್ನಾಟಕ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಕ್ರಮಕೈಗೊಳ್ಳಲಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಈಗಾಗಲೇ ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆ, ಶಕ್ತಿಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಗಳ ಮೂಲಕ ತಾಲ್ಲೂಕು ಆಡಳಿತ ಅರ್ಹಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಪೋಲೀಸ್ ಉಪಾಧೀಕ್ಷಕರಾದ ಶ್ರೀಮತಿ ಎಸ್.ಚೈತ್ರ, ಪೋಲೀಸ್ ನಿರೀಕ್ಷಕರಾದ ರಾಘವೇಂದ್ರ ಕಾಂಡಿಕೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಣ ನಿರ್ದೇಶಕರಾದ ಮನೋಹರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ಶಿಕ್ಷಣ ಸಂಯೋಜಕರಾದ ಶಶಿಧರ್, ನಗರಸಭೆ ಸದಸ್ಯರುಗಳಾದ ಶ್ರೀಮತಿ ಶಿವರಂಜಿನಿಯಾದವ್, ಅಜಯ್ ಕುಮಾರ್, ಶ್ರೀಮತಿ ಅಂಬಿಕಾ ಆರಾಧ್ಯ, ಶ್ರೀಮತಿ ವಿಶಾಲಾಕ್ಷಿ, ಶ್ರೀಮತಿ ರತ್ನಮ್ಮ, ಶ್ರೀಮತಿ ಮೊದಲಮರಿಯಾ, ಶ್ರೀಮತಿ ಸುರೇಖಾ, ಈರಲಿಂಗೇಗೌಡ, ಡಿ.ಸಣ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಬಗರ್ ಹುಕುಂ ಸಮಿತಿ ಸದಸ್ಯೆ ಡಾ.ಸುಜಾತ, ಬೆಸ್ಕಾಂ ಸಮಿತಿ ಸದಸ್ಯ ಪಿಲಾಲಿ ಮಂಜುನಾಥ್, ಕೆಡಿಪಿ ಸದಸ್ಯ ಅಯೂಬ್, ಫಕ್ರುದ್ದೀನ್, ಜಿಲ್ಲಾ ರೈತಸಂಘದ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಕರವೇ ಅಧ್ಯಕ್ಷ ರಾಮಕೃಷ್ಣಪ್ಪ, ಕಾರ್ಯದರ್ಶಿ ದಾದಾಪೀರ್, ಕರ್ನಾಟಕ ಹಿತರಕ್ಷಣಾ ಸೇನೆ ಅಧ್ಯಕ್ಷ ಬಸವರಾಜ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಆರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಎಲ್ಲರನ್ನು ಸ್ವಾಗತಿಸಿದರು. ಕೊನೆಯಲ್ಲಿ ಸೇವಾದಳ ಶಶಿಧರ್ ವಂದನಾರ್ಪಣೆ ನೆರವೇರಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page