ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ: ಶಾಸಕ ಟಿ ರಘುಮೂರ್ತಿ.

by | 28/12/23 | ಸುದ್ದಿ


ಚಳ್ಳಕೆರೆ ಡಿ.27 ನಗರದ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ 138ನೇ ಸಂಸ್ಥಾಪನ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಎಓ ಹ್ಯೂಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಂತರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲೆಂದೇ ಹುಟ್ಟು ಹಾಕಲಾದ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಬ್ರಿಟಿಷರ ವಿರುದ್ಧ ನಡೆದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ಪಾತ್ರ ವಹಿಸಿದ್ದ ಕಾಂಗ್ರೆಸ್‍ನ ಹಲವು ನಾಯಕರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಗಾಂಧಿ ಅವರ ಇಡೀ ಕುಟುಂಬದ ತ್ಯಾಗಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ. 138ನೇ ಸಂಸ್ಥಾಪನಾ ದಿನ ಆಚರಿಸುತ್ತಿರುವುದು ಶ್ಲಾಘನೀಯ. ಎಲ್ಲೆಡೆ ಕಾಂಗ್ರೆಸ್ ತತ್ವ ಸಿದ್ಧಾಂತ, ದೇಶಕ್ಕೆ ನೀಡಿದ ಕೊಡುಗೆ, ಪಕ್ಷದ ನಾಯಕರ ತ್ಯಾಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೆ ಸ್ವಾತಂತ್ರ್ಯ ಲಭಿಸಲು ಕಾಂಗ್ರೆಸ್ ಪ್ರಮುಖ ಕಾರಣವಾಗಿರುವುದಲ್ಲದೆ, ದೇಶದ ನಿವಾಸಿಗಳಾದ ಸರ್ವಧರ್ಮ ಗಳ ಜನರ ಹಿತಕಾಯುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ

ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಮಾಜದಲ್ಲಿ ಕೋಮು ಸೌಹಾರ್ದತೆ ಮನೆ ಮಾಡಿತ್ತು. ಎಲ್ಲಾ ವರ್ಗದ ಜನರ ಹಿತ ಕಾಯುವ ಯೋಜನೆ ಜಾರಿಗೊಳಿಸಿ, ದೇಶದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿತ್ತು. ಬಡ ಮತ್ತು ಶೋಷಿತ ವರ್ಗಗಳ ಜನರ ಹಿತ ಕಾಯುವ ಕೆಲಸ ಕಾಂಗ್ರೆಸ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಸಾಧನೆ ಹಾಗೂ ಧ್ಯೇಯೋದ್ದೇಶಗಳನ್ನು ಜನರಲ್ಲಿ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕೆಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಮುಖಂಡ ಹೆಚ್ಎಸ್ ಸೈಯದ್ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.ಕಾಂಗ್ರೆಸ್‌ ಪಕ್ಷವೊಂದೇ ದೇಶದ ಬದ್ಧತೆ ಮತ್ತು ಸಮಗ್ರತೆಗಾಗಿ ಚಿಂತನೆ ಮಾಡಿ ಪಕ್ಷದ ನಾಯಕರು ಕೆಲಸ ಮಾಡಿದ್ದಾರೆ. ಬ್ರಿಟಿಷರಿಂದ ದೇಶದವನ್ನು ಮುಕ್ತ ಮಾಡುವಾಗಲೂ ನಮ್ಮ ನಾಯಕರು ತಮ್ಮ ಜೀವವೇ ಬದಲಿದಾನ ಮಾಡಿದ್ದಾರೆ. ದೇಶಕ್ಕಾಗಿ ಬಿಜೆಪಿಗರು ಯಾವುದೇ ಕೊಡುಗೆ ಪೀಡಿಲ್ಲ, ಆದರೂ ಅವರು ನಮ್ಮ ದೇಶ, ನಾವು ಹಿಂದೂ ಎನ್ನುವ ಹೆಸರಿನಲ್ಲಿ ರಾಜಕೀಯ ಮಾಡಿ ಜನರಲ್ಲಿರುವ ಒಗ್ಗಟ್ಟು ಒಡೆಯುವ ಪ್ರಯತ್ನ ನಿರಂತರವಾಗಿ ಮಾಡುತ್ತಲೇ ಬರುತ್ತಿದ್ದಾರೆ.ಕಾಂಗ್ರೆಸ್‌ ಪಕ್ಷಕ್ಕೆ ಬಹಳ ದೊಡ್ಡ ಇತಿಹಾಸವಿದೆ. ಗಾಂಧಿ ಮನೆತನವೂ ತನ್ನ ಕೊಡುಗೆ ನೀಡಿದೆ. ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಬಲಿದಾನವಾಗಿದ್ದಾರೆ. ಸೋನಿಯಾ ಗಾಂಧಿ ಮತ್ತು ಈಗ ರಾಹುಲ್‌ ಗಾಂಧಿ ಅವರು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ಸಿಗರ ಶ್ರಮದಿಂದಾಗಿ ಇಂದು ದೇಶದಲ್ಲಿ ಪ್ರಮುಖ ಪಕ್ಷವಾಗಿ ಉಳಿದಿದೆ. ಅಪಾರ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ದೇಶದ ಕೆಳ ವರ್ಗ, ಅಲ್ಪಸಂಖ್ಯಾತ ಸಮುದಾಯಗಳು ಹಾಗೂ ಇತರೆ ಎಲ್ಲ ವರ್ಗಗಳ ಜನರಿಗೆ ಭರವಸೆ ಆಶಾಕಿರಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ರಂಗಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ನಗರಸಭೆ ಸದಸ್ಯರಾದ ಶ್ರೀಮತಿ ಸುಮಾ ಭರಮಯ್ಯ, ಶ್ರೀಮತಿ ಕವಿತಾ ಬೋರಯ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಕಿರಣ್ ಶಂಕರ್, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಗಿರಿಯಪ್ಪ, ಆಂಜನೇಯ, ಮುಖಂಡರುಗಳಾದ ಸೈಯದ್, ಅನ್ವರ್ ಮಾಸ್ಟರ್, ರಾಜಪ್ಪ, ನೇತಾಜಿ ಪ್ರಸನ್ನಕುಮಾರ್, ಶಿವಕುಮಾರ್, ರಾಜಣ್ಣ, ಖಾದರ್, ಯರಬಾಲಪ್ಪ, ಮಹಿಳಾ ಮುಖಂಡರಾದ ಸರಸ್ವತಮ್ಮ, ರಾಜಕ್ಕ, ಕವಿತಾ, ಸುಮಲತಾ, ರಾಜೇಶ್ವರಿ, ಭಾಗ್ಯಮ್ಮ, ಭಾಗ್ಯಲಕ್ಷ್ಮಿ,ಮಂಜುಳಾ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page