ಭಾರತ ಸೇವಾದಳದ ದ್ಯೇಯೋದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ಶಿಕ್ಷಕರ ಜವಾಬ್ದಾರಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್.

by | 20/12/23 | ಶಿಕ್ಷಣ


ಚಳ್ಳಕೆರೆ:ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲಾಡ್ಯರನ್ನಾಗಿಸಲು ಅವರಲ್ಲಿ ಶಿಸ್ತು, ದೇಶಭಕ್ತಿ, ಸೇವಾ ಮನೋಭಾವನೆಯನ್ನು ಮತ್ತು ಯೋಗ, ಕ್ರೀಡೆಯಂತಹ ವಿಶೇಷ ಚಟುವಟಿಕೆಗಳನ್ನು ನಡೆಸಲು ಶಿಕ್ಷಕರಿಗೆ ಪುನಶ್ಚೇತನ ತರಬೇತಿಯ ಅಗತ್ಯತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಅಭಿಪ್ರಾಯಪಟ್ಟರು.


ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸೇವಾ ದಳದ ಶತಮಾನೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸೇವಾದಳ ತರಬೇತಿ ಪಡೆದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.  ಶಾಲೆಗಳಲ್ಲಿ ಕಡ್ಡಾಯವಾಗಿ ಸೇವಾದಳ ಘಟಕಗಳನ್ನು ಆರಂಭಿಸಬೇಕು, ದೈಹಿಕ ಶಿಕ್ಷಕರು ನಿರುತ್ಸಾಹಿಗಳಾಗದೆ ಭಾರತ ಸೇವಾದಳ ಸ್ಕೌಟ್ಸ್ ,ಗೈಡ್ಸ್ ಸಂಸ್ಥೆಗಳ ದೇಯೋದ್ಧೇಶಗಳನ್ನು ಅರ್ಥ ಮಾಡಿಕೊಂಡು.ಮಕ್ಕಳಿಗೆ ಸೇವಾದಳ ಶಿಕ್ಷಣವನ್ನು ನೀಡಬೇಕು, ಗಾಂಧೀಜಿಯವರ ಶಾಂತಿ ಸೌಹಾರ್ದತೆ ಹಾಗೂ ಅಹಿಂಸ ತತ್ವಗಳು ಸಮಾಜದಲ್ಲಿ ಬೇರೂರುವಂತೆ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಭಾರತೀಯ ಸೇವಾದಳದ ವಲಯ ಸಂಘಟಕ ಅಣ್ಣಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತ ಸೇವಾದಳವನ್ನು ಉಳಿಸಿ ಬೆಳೆಸಲು ಶಿಕ್ಷಕರು ಮುಂದಾಗಬೇಕು ದೇಶದಲ್ಲಿ ಅತ್ಯಂತ ಅತ್ಯುತ್ತಮ ಸಂಸ್ಥೆಯಾದ ಭಾರತ ಸೇವಾದಳ ಸ್ವಾರ್ಥಕ್ಕಾಗಿ ಹುಟ್ಟಿದ್ದಲ್ಲ ಸ್ವಾತಂತ್ರ್ಯಕ್ಕಾಗಿ ದೇಶಭಕ್ತರನ್ನು ಹೋರಾಟಗಾರರನ್ನು ರಾಷ್ಟ್ರ ಪ್ರೇಮಿಗಳನ್ನು ತಯಾರು ಮಾಡಲು ಹುಟ್ಟಿದ ಸಂಸ್ಥೆ, ಲಕ್ಷಾಂತರ ದೇಶಭಕ್ತರು ಮತ್ತು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಕೊಟ್ಟ ಭಾರತ ಸೇವಾದಳ ಇತ್ತೀಚಿನ ವರ್ಷಗಳಲ್ಲಿ ಸೊರಗುತ್ತಿದ್ದು ಅದನ್ನು ಉಳಿಸಿ ಬೆಳೆಸುವ ಹೊಣೆ ಸೇವಾದಳ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುನಿಲ್ ನಾಯಕ್ ಉಪಾಧ್ಯಕ್ಷ ಪಾಲಯ್ಯ ಸಿದ್ದೇಶ್ ರಾಮ ನಾಯಕ್ ರಾಜಣ್ಣ ತಿಪ್ಪೇಸ್ವಾಮಿ ಅಬ್ದುಲ್ ರಜಾಕ್ ವೇಲೂರು ಪ್ರಾಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page