ಚಿತ್ರದುರ್ಗ ನ.10:
ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ವತಿಯಿಂದ ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ನೆರವೇರಿತು.
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಡಿವೈಎಸ್‍ಪಿ ಎನ್.ಮೃತ್ಯುಂಜಯ ಕಾರ್ಯಕ್ರಮ ಉದ್ಘಾಟಿಸಿ, ಭ್ರಷ್ಟಾಚಾರ ತಡೆಗಟ್ಟಲು ಪ್ರಮುಖ ಪಾತ್ರ ವಹಿಸುವ ನಿಟ್ಟಿನಲ್ಲಿ ಲೋಕಾಯುಕ್ತದ ಪಾತ್ರ, ಲೋಕಾಯುಕ್ತದ ರಚನೆ, ಅದರ ಕಾರ್ಯಾಚರಣೆ, ನ್ಯಾಯಾಂಗ ವ್ಯವಸ್ಥೆ ಮುಂತಾದ ಅನೇಕ ವಿಷಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ತದನಂತರ ಭ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಪ್ರತಿಜ್ಞಾವಿಧಿಬೋಧಿಸಲಾಯಿತು.
ಸಂಜೀವಿನಿ ಜೀವರಕ್ಷಕ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ ಡಾ.ಸೌಮ್ಯ ಮಂಜುನಾಥ್ ಮಾತನಾಡಿ, ಯುವ ಸಮುದಾಯ ಭ್ರಷ್ಟಾಚಾರ ವನ್ನು ಮೊದಲು ಮನೆಯಿಂದ ನಿವಾರಣೆ ಮಾಡಿ, ನಂತರ ಸಾರ್ವಜನಿಕ ವಲಯದಲ್ಲಿ ನಿವಾರಿಸುವ ಮೂಲಕ ರಾಷ್ಟ್ರವನ್ನು ಸದೃಢವಾಗಿ ಕಟ್ಟಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಅವರು, ಭ್ರಷ್ಟಾಚಾರ ತಡೆ, ಜನಸಾಮಾನ್ಯರಿಗೆ ಲೋಕಾಯುಕ್ತದ ಕುರಿತು ಅರಿವು ಮೂಡಿಸುವಿಕೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಭ್ರಷ್ಟಾಚಾರ ಕಡಿಮೆಯಾಗಿ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದರು.
ಕಾಲೇಜು ಪ್ರಾಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ.ಎಲ್.ನಾಗರಾಜಪ್ಪ, ಪ್ರಾಧ್ಯಾಪಕರಾದ ಡಾ.ಆರ್.ಗಂಗಾಧರ, ಡಾ.ಯಶೋಧರ, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ.ವಿ.ಪ್ರಸಾದ್, ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮ್ಯುಯೆಲ್, ಐಕ್ಯೂಐಸಿ ಸಂಚಾಲಕ ಪ್ರೊ.ಜಿ.ಡಿ.ಸುರೇಶ, ಕ್ರೀಡಾಸಮಿತಿಯ ಸಂಚಾಲಕ ಡಾ. ಟಿ.ಶ್ಯಾಮರಾಜ, ರೇಂಜರ್ ಅಧಿಕಾರಿಗಳಾದ ಡಾ.ಲೀಲಾವತಿ, ಎನ್.ಎಸ್.ಎಸ್.ನ ಪ್ರೊ. ಬಿ.ಕೆ.ಬಸವರಾಜು ಇದ್ದರು.
ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments