ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by | 19/01/24 | ಆರೋಗ್ಯ


ಬೆಂಗಳೂರು.. ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಎಸಿಪಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಲು ಗೃಹ ಇಲಾಖೆಗೆ ಮನವಿ ಸಲ್ಲಿಸಲಾಗುವುದು

ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು PC&PNDT ಕಾಯ್ದೆ ಅಡಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ವಿಚಾರದಲ್ಲಿ ಜಾಗೃತಿಯ ಜೊತೆಗೆ ಕಠಿಣ ಕ್ರಮಗಳು ಆಗಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ಮೇಲ್ವಿಚಾರಣಾ ಸಮಿತಿಯ ಮೊದಲ ಸಭೆ ಇಂದು ಸೇರಲಾಗಿತ್ತು. ನಾಲ್ವರು ಶಾಸಕಿಯರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮಿತಿಯ ಸದಸ್ಯರಿದ್ದಾರೆ. ಭ್ರೂಣ ಹತ್ಯೆ ತಡೆ ನಿಟ್ಟಿನಲ್ಲಿ ಶಾಸಕಿ ರೂಪಕಲಾ, ನಯನಾ ಮೊಟಮ್ಮ, ಲತಾ ಮಲ್ಲಿಕಾರ್ಜುನ್ ಅವರುಗಳು ತಮ್ಮ ಸಲಹೆಗಳನ್ನ ನೀಡಿದ್ದಾರೆ. ಪ್ರತಿ ಹಂತದಲ್ಲಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ಹೆಣ್ಣು ಮಕ್ಕಳು ಸಮಾಜಕ್ಕೆ ಎಷ್ಟು ಮುಖ್ಯ ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಭ್ರೂಣ ಹತ್ಯೆಗಳ ತಡೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಜ್ಯಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲು ನಿರ್ಧರಿಸಿದ್ದೇವೆ.‌ ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ pc&pndt ಕಾಯ್ದೆ ಅಡಿ ಕಾರ್ಯನಿರ್ವಹಿಸಿ ಹೆಚ್ಚು ನಿಗಾ ವಹಿಸಲಿವೆ. ಅಲ್ಲದೇ ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಪ್ರತ್ಯೇಕವಾಗಿ ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಬ್ ಇನ್ಸ್ ಪೆಕ್ಟರ್ ನಿಯೋಜಿಸುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು. ಇದರಿಂದ ಭ್ರೂಣ ಹತ್ಯೆ ಪ್ರಕರಣಗಳನ್ನ ಟ್ರೇಸ್ ಮಾಡಲು ಸಹಕಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮಗಳು ಆಗಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಿರುವ ಕಾಯ್ದೆಯಲ್ಲಿ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷದ ವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ನಾನ್ ಬೇಲಬಲ್ ಕೇಸ್ ಆಗಬೇಕು. ಈ ನಿಟ್ಟಿನಲ್ಲಿ ಮುಂದಿನ ಸಭೆ ತೀರ್ಮಾನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page