ತುಮಕೂರು: ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯಲು ಹೊರಟಿದ್ದವರನ್ನು ಬಿಡದೆ ಕೆರೆಯ ಬಳಿ ಜವರಾಯನ ಹಟ್ಟಹಾಸಕ್ಕೆ ಒಂದೇ ಕುಟುಂದ ಮೂರು ಜನ ಮೃತಪಟ್ಟ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಸಮೀಪದ ರಾಮಲಿಂಗಾಪುರ ಬಳಿಯ ಕೆರೆಯಲ್ಲಿ ಕಾರು ಬಿದ್ದಿದೆ. ಬೆಳಗಿನ ಜಾವ ಘಟನೆ ನಡೆದಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಪ್ರವೀಣ್ ಎಂಬ ವ್ಯಕ್ತಿಯು ಪಾರಾಗಿದ್ದಾರೆ. ಪ್ರವೀಣ್ ಪತ್ನಿ ಯಮುನಾ, ಮಾವ ದೊಡ್ಡಣ್ಣ, ಅತ್ತೆ ಸಣ್ಣಮ್ಮ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಚಲಿಸುತ್ತಿದ್ದ ಎಲ್ಲರೂ ಶಿರಾ ತಾಲೂಕಿನ ವೀರಾಪುರ ಗ್ರಾಮದವರಾಗಿದ್ದಾರೆ.ಮಾರುತಿ ಆಲ್ಟೊ ಕಾರಿನಲ್ಲಿ ವೀರಾಪುರ ಗ್ರಾಮದಿಂದ ನಾಲ್ವರೂ ಧರ್ಮಸ್ಥಕ್ಕೆ ತೆರಳುತ್ತಿದ್ದರು. ಮಂಜುನಾಥನ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಶಿರಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಮೂವರ ಶವಗಳನ್ನು ಹೊರೆತೆಗೆದಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಂಜುನಾಥನ ದರ್ಶನ ಪಡೆಯುವ ಮುನ್ನವೇ ಒಂದೇ ಕುಟುಂಬದ ಮೂರು ಜನರು ಬಾರದ ಲೋಕಕ್ಕೆ ಶಿರಾ ಸಮೀಪ ದುರ್ಘಟನೆ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments