ಹಿರಿಯೂರು :
ಭಾರತದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ರಾಷ್ಟ್ರನಾಯಕರು ಯಾವುದೇ ಜಾತಿಬೇಧವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಸೇರಿ ಹೋರಾಡಿದ್ದು, ಇಂತಹ ಮಹಾನ್ ನಾಯಕರುಗಳ ಪರಿಚಯ ಮಕ್ಕಳಿಗೆ ಆಗಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಸ್ವತಂತ್ರ್ಯ ದಿನಾಚರಣೆಯ ಮುನ್ನಾ ದಿನ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಕ್ಕಮಕ್ಕಳಿಗೆ ಶಾಲಾ ಹಂತದಲ್ಲಿಯೇ ರಾಷ್ಟ್ರೀಯ ಹಬ್ಬಗಳ ಆಚರಣೆ ಹಾಗೂ ಅವುಗಳ ಮಹತ್ವದ ಬಗ್ಗೆ ತಿಳಿಸುವುದರಿಂದ ಅವರಲ್ಲಿ ಬಾಲ್ಯದಿಂದಲೇ ರಾಷ್ಟ್ರಾಭಿಮಾನ ಹಾಗೂ ದೇಶಭಕ್ತಿ ಬೆಳೆಸಬಹುದಾಗಿದ್ದು, ಇಂದಿನ ಆಧುನಿಕ ಜಗತ್ತಿನಲ್ಲಿ ದೇಶದ ಬಗ್ಗೆ ಅಭಿಮಾನ ಪ್ರೀತಿ ಹಾಗೂ ಗೌರವ ಮನೋಭಾವ ಬೆಳೆಸುವುದರ ಜೊತೆಗೆ ಸಂಸ್ಕಾರ, ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ರೂಪಿಸುವುದು ಇಂದಿನ ಅತ್ಯಗತ್ಯವಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಶ್ರೀಮತಿ ವಸಂತಾ, ವಾಣಿವಿಲಾಸ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವ್ಯವಸ್ಥಾಪಕಿ ಶ್ರೀಮತಿ ನಂದಿನಿ, ಶಿಕ್ಷಕ-ಶಿಕ್ಷಕಿಯರುಗಳಾದ ಶ್ರೀಮತಿ ರಚನ, ಶ್ರೀಮತಿ ರಂಜಿತಾ, ಶ್ರೀಮತಿ ಸಬೀಹಾ, ಶ್ರೀಮತಿ ಶಬಾನಾ, ಶ್ರೀಮತಿಅಕ್ಷಿತಾ, ರಂಜಿತಾ, ಶಿಕ್ಷಕರಾದ ಉಮೇಶ್ ಯಾದವ್, ಶಿವರಾಜ್ ಸೇರಿದಂತೆ ಶಾಲೆಯ ಶಿಕ್ಷಕ, ಶಿಕ್ಷಕಿಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments