ಮಡಿಲು ಸಂಸ್ಥೆಯಿಂದ ಯೋಗ ದಿನಾಚರಣೆ* ಯೋಗದಿಂದ ಉತ್ತಮ ಆರೋಗ್ಯ ಲಭಿಸುತ್ತದೆ: ಮುಖ್ಯ ಶಿಕ್ಷಕ ಫಯಾಸ್*

by | 21/06/24 | ಆರೋಗ್ಯ


ಚಿತ್ರದುರ್ಗ:

ಯೋಗ ಮಾಡುವುದರಿಂದ ರೋಗ ಬರುವುದಿಲ್ಲ ದೇಹವನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಆ ಒಂದು ನಿಟ್ಟಿನಲ್ಲಿ ಪ್ರತಿಯೊಬ್ಬರು ಯೋಗ ಮಾಡುವುದರ ಮೂಲಕ ತಮ್ಮ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಗೌಸ್ ಫಯಾಜ್ ತಿಳಿಸಿದರು.


ನಗರದ ಐಯುಡಿಪಿ ಲೇಔಟ್ ನಲ್ಲಿ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನೆಹರು ಯುವ ಕೇಂದ್ರ ಚಿತ್ರದುರ್ಗ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಆರೋಗ್ಯವೇ ಭಾಗ್ಯ ಎನ್ನುವ ನಾಡು ನುಡಿಯಂತೆ ನಮ್ಮ ಆರೋಗ್ಯ ಚೆನ್ನಾಗಿರಬೇಕಾದರೆ ಯೋಗ ನಮ್ಮ ಜೀವನಕ್ಕೆ ಅತ್ಯಮೂಲ್ಯ ಆಯಸ್ಸು ಹೆಚ್ಚಾಗಬೇಕಾದರೆ ಪ್ರತಿದಿನ ಯೋಗ ಮಾಡುವುದರ ಮೂಲಕ ನಮ್ಮ ಆರೋಗ್ಯವನ್ನು ನಾವು ಸದೃಢವಾಗಿ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ನೂರಾರು ವರ್ಷಗಳ ಹಿಂದೆ ಅನೇಕ ಋಷಿಮುನಿಗಳು ನೂರು ವರ್ಷಗಳ ಕಾಲ ಬದುಕ್ತಿದ್ರು, ಕಾರಣ ಅವರ ಆರೋಗ್ಯದ ಸಮತೋಲನ ಅತ್ಯಂತ ಮುಖ್ಯವಾಗಿರುತ್ತಿತ್ತು. ಹಾಗಾಗಿ ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕಾದರೆ ಸದೃಢವಾದ ದೇಹವನ್ನು ಕೂಡ ಕಾಪಾಡಿಕೊಳ್ಳಬೇಕು ಉತ್ತಮವಾದ ಊಟ ಸೇವನೆ ಮಾಡಬೇಕು, ಜೊತೆಗೆ ದಿನನಿತ್ಯದ ವ್ಯಾಯಾಮ ಯೋಗವನ್ನು ಮಾಡಿದರೆ ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ತಿಳಿಸಿದರು.

ಮನುಷ್ಯ ಒಂದಲ್ಲ ಒಂದು ದಿನ ನಶಿಸಿ ಹೋಗುತ್ತಾನೆ ಆದರೆ ಅವನು ಮಾಡಿದ ಸೇವೆ ಮಾತ್ರ ಶಾಶ್ವತವಾಗಿ ಉಳಿಯುತ್ತದೆ ಅಂತಹ ಸೇವೆಗಳನ್ನ ಮಡಿಲು ಸಂಸ್ಥೆ ಮಾಡುತ್ತಿದೆ ಎಂದರು

ಮಡಿಲು ಸಂಸ್ಥೆಯ ಗೌರವಧ್ಯಕ್ಷರಾದ ರಾಕೇಶ್ ಕುಮಾರ್ ಆರ್.ಹೆಚ್ ಮಾತನಾಡಿ ಯೋಗ ಮಾಡಿದರೆ ರೋಗ ಇಲ್ಲ ಎನ್ನುವ ಮಾತಿನ ಸಾರಾಂಶದೊಂದಿಗೆ ನಮ್ಮ ಜೀವನದಲ್ಲಿ ಯೋಗವನ್ನು ಅಳವಡಿಕೆ ಮಾಡಿಕೊಂಡಿದ್ದಾರೆ ಉತ್ತಮವಾದ ಆರೋಗ್ಯವನ್ನು ನಾವು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು ಅದರೊಟ್ಟಿಗೆ ವಿದ್ಯಾರ್ಥಿಗಳು ಶಾಲೆಗೆ ಉತ್ತಮ ಕೊಡುಗೆಯನ್ನು ನೀಡಬೇಕು ಎನ್ನುವ ಛಲವನ್ನು ಇಟ್ಟುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳು ಈಗನಿಂದಲೇ ಉನ್ನತ ವ್ಯಾಸಂಗದ ಕಡೆಗೆ ಗಮನ ನೀಡಬೇಕು ಅದರೊಟ್ಟಿಗೆ ತಮ್ಮ ಸ್ವಚ್ಛತೆ, ಪರಿಸರ ಸಂರಕ್ಷಣೆಯನ್ನು ಮಾಡುವ ಸೇವ ಮನೋಭಾವನೆಯನ್ನು ಬಳಸಿಕೊಳ್ಳಬೇಕು ಮತ್ತು ಶಿಕ್ಷಕರಿಗೆ ಉತ್ತಮವಾದ ವಿದ್ಯಾರ್ಥಿಗಳು ಎನ್ನುವ ಮಟ್ಟಿಗೆ ತಮ್ಮ ನಡೆಯನ್ನ ಬದಲಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಿಕ್ಷಕರಾದ ಪ್ರಸನ್ನ ಮಾತನಾಡಿ ವಿಶ್ವದಾದ್ಯಂತ ಜೂನಗ 21ರಂದು ಯೋಗ ದಿನವನ್ನು ಆಚರಣೆ ಮಾಡುತ್ತಿದ್ದಾರೆ ಆದರೆ ನಮ್ಮ ಆರೋಗ್ಯ ದಿನ ವಿಡಿ ಚೆನ್ನಾಗಿರಬೇಕಾದರೆ ಪ್ರತಿದಿನವೂ ಕೂಡ ಯೋಗದ ಕಡೆಗೆ ನಾವು ಮುಖ ಮಾಡಿದರೆ ಉತ್ತಮ ಆರೋಗ್ಯ ಲಭಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗಾಗಿ ವಿದ್ಯಾರ್ಥಿಗಳು ಈಗಿನಿಂದಲೇ ಯೋಗ, ಜ್ಞಾನ ಕಡೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದರೆ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಈ ಒಂದು ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಶಿಕ್ಷಕರಾದ ಸಲ್ಮಾ,ಅನುಸೂಯಮ್ಮ,ಪ್ರಸಾದ್, ಅಕ್ಕಮಹಾದೇವಿ,ಅನಿತಾ ಕುಮಾರಿ,ರಾಧಾ ಹಾಗೂ ಸಂಸ್ಥೆಯ ಕಾರ್ಯದರ್ಶಿಯಾಗಿ ಆನಂದಪ್ಪ, ಮಹಾಂತೇಶ್, ಪ್ರವೀಣ್ ಕುಮಾರ್, ದರ್ಶನ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page