ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಆಯೋಗದ ಅನುಮೋದನೆಗೆ ಸಲ್ಲಿಕೆ

by | 14/03/24 | ಸುದ್ದಿ


ಚಿತ್ರದುರ್ಗ ಮಾ.14:
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಕೇಂದ್ರಗಳ ಹೆಸರು ಹಾಗೂ ವಿಳಾಸ ಬದಲಾವಣೆ ಪ್ರಸ್ತಾವನೆಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಪಡೆಯುವ ಕುರಿತು ಬುಧವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ನಡೆಸಲಾಯಿತು.
ಚುನಾವಣಾ ಆಯೋಗದ ನಿಯಮಾನುಸಾರ ಮತಗಟ್ಟೆಗಳ ಹೆಸರು ಬದಲಾವಣೆ ಪ್ರಸ್ತಾವನೆಗಳಿದ್ದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಅಂತಹ ಮತದಾನ ಕೇಂದ್ರಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಭಾರತ ಚುನಾವಣಾ ಆಯೋಗದ ಅನುಮೋದನೆಗೆ ಸಲ್ಲಿಸಬೇಕಿರುತ್ತದೆ. ಅದರಂತೆ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ಮತಗಟ್ಟೆಗಳ ಪಟ್ಟಿಯನ್ನು ಹಾಜರಿದ್ದ ಎಲ್ಲಾ ರಾಜಕೀಯ ಪಕ್ಷಗಳ ಗಮನಕ್ಕೆ ತರಲಾಯಿತು. ಅಸ್ತಿತ್ವದಲ್ಲಿರುವ ಮತಗಟ್ಟೆಗಳ ಹೆಸರು ಹಾಗೂ ವಿಳಾಸ ಬದಲಾವಣೆಗೆ ಪ್ರಸ್ತಾಪಿತ ಮತಗಟ್ಟೆಗಳ ಹೆಸರುಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಗಮನಕ್ಕೆ ತರಲಾಯಿತು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಮತಗಟ್ಟೆಗಳ ಸ್ಥಳ ಹಾಗೂ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತಗಟ್ಟೆ ಸಂಖ್ಯೆ 217ರ ಸರ್ಕಾರಿ ಪ್ರೌಢಶಾಲೆ, ಪಿ.ಮಹದೇವಪುರ-1 (ರೂಂ ನಂ-1) ಮತಗಟ್ಟೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿ.ಮಹದೇವಪುರ-1 (ರೂಂ-1)ಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 224 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಓಬಳಾಪುರದಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಓಬಳಾಪುರಕ್ಕೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ-225 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,. ರೂಂ.-1, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಯಿಂದ ಸರ್ಕಾರಿ ಪ್ರೌಢಶಾಲೆ, ರೂಂ-1, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 226 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-2 ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಯಿಂದ ಸರ್ಕಾರಿ ಪಿಯು ಕಾಲೇಜು, ರೂಂ-2, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಗೆ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಮತಗಟ್ಟೆಗಳ ಸ್ಥಳ ಹಾಗೂ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತಗಟ್ಟೆ ಸಂಖ್ಯೆ 39 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-1, ಸಿದ್ದವ್ವನಹಳ್ಳಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-1, ವಡ್ಡರಸಿದ್ದವ್ವನಹಳ್ಳಿಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 40 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-2, ಸಿದ್ದವ್ವನಹಳ್ಳಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-2, ವಡ್ಡರಸಿದ್ದವ್ವನಹಳ್ಳಿಗೆ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಜಿಲ್ಲೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242 ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 299 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1661 ಮತಗಟ್ಟೆಗಳು ಇವೆ. ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮತಗಟ್ಟೆಗಳ ಹೆಸರು ಬದಲಾವಣೆಯ ಪ್ರಸ್ತಾವನೆಗಳನ್ನು ಸಮುಚಿತ ಮಾರ್ಗದ ಮೂಲಕ ಭಾರತ ಚುನಾವಣಾ ಆಯೋಗಕ್ಕೆ ಅನುಮೋದನೆಗಾಗಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಸಿಪಿಐ ಡಿಒಸಿ ಸಿ.ಕೆ.ಗೌಸ್‍ಪೀರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ನರೇಂದ್ರ, ಬಿಎಸ್‍ಪಿ ಜಿಲ್ಲಾ ಸಂಯೋಜಕ ಹೆಚ್.ಎನ್.ಶಿವಮೂರ್ತಿ ಸೇರಿದಂತೆ ಚುನಾವಣಾ ಸಿಬ್ಬಂದಿ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page