ಚಿತ್ರದುರ್ಗ ಮಾ.8:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು, ಚಿತ್ರದುರ್ಗ, ಹಿರಿಯೂರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆಗಳ ಸ್ಥಳ ಹಾಗೂ ಹೆಸರು ಬದಲಾವಣೆ ಮಾಡಲಾಗಿದೆ.
ಜಿಲ್ಲೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಮತಗಟ್ಟೆ ಹೆಸರು ಬದಲಾವಣೆ ಆಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4 ಮತಗಟ್ಟೆಗಳು ಸ್ಥಳ ಬದಲಾವಣೆ ಹಾಗೂ 5 ಮತಗಟ್ಟೆಗಳು ಹೆಸರು ಬದಲಾಗಿವೆ. ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಮತಗಟ್ಟೆಗಳು ಹೆಸರು ಬದಲಾವಣೆಯಾಗಿವೆ. ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಮತಗಟ್ಟೆಗಳು ಸ್ಥಳ ಬದಲಾವಣೆಯಾಗಿವೆ.
ಸ್ಥಳ ಬದಲಾವಣೆ ಆಗಿರುವ ಮತಗಟ್ಟೆಗಳ ವಿವರ ಇಂತಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 45 ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯನ್ನು ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಹೊಸ ಕಟ್ಟಡ) ಇಲ್ಲಿಗೆ ಸ್ಥಳ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 52 ಮಠದ ಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೂಂ ನಂ-4ರ ಮತಗಟ್ಟೆಯನ್ನು ಮಠದ ಕುರುಬರಹಟ್ಟಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ರೂಂ-1ಕ್ಕೆ ಸ್ಥಳ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 53 ಮಠದ ಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೂಂ ನಂ-5ರ ಮತಗಟ್ಟೆಯನ್ನು ಮಠದ ಕುರುಬರಹಟ್ಟಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ರೂಂ-2ಕ್ಕೆ ಸ್ಥಳ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 124 ಚಿತ್ರದುರ್ಗದ ಬುರುಜನಹಟ್ಟಿಯ ಶ್ರೀ ಕೋಟೆ ಆಂಜನೇಯಸ್ವಾಮಿ ದೇಗುಲದ ಎದುರಿನ ಓಂ ನರ್ಸರಿ ಶಾಲೆಯ ಮತಗಟ್ಟೆಯನ್ನು ಚಿತ್ರದುರ್ಗ ಬುರುಜನಹಟ್ಟಿಯ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇಗುಲದ ಪಕ್ಕದಲ್ಲಿರುವ ಓಂ ನರ್ಸರಿ ಶಾಲೆಗೆ ಸ್ಥಳ ಬದಲಾವಣೆ ಮಾಡಲಾಗಿದೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಿಂದ ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಹೊಸಕಟ್ಟಡ)ಗೆ ಸ್ಥಳ ಬದಲಾವಣೆ ಮಾಡಲಾಗಿದೆ. ಕಾಳಘಟ್ಟ ವಡ್ಡರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಿಂದ ಕಾಳಘಟ್ಟ ವಡ್ಡರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಹೊಸ ಕಟ್ಟಡ)ಗೆ ಸ್ಥಳ ಬದಲಾವಣೆ ಮಾಡಲಾಗಿದೆ.
ಹೆಸರು ಬದಲಾವಣೆ ಆಗಿರುವ ಮತಗಟ್ಟೆಗಳ ವಿವರ ಇಂತಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 23 ಗೋನೂರು ಮಜರೆ ಸಾಸಲಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯು ಗೋನೂರು ಮಜರೆ ಸಾಸಲಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಂದು ಹೆಸರು ಬದಲಾಗಿದೆ. ಮತಗಟ್ಟೆ ಸಂಖ್ಯೆ 68 ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯ ಜೋಡಿಚಿಕ್ಕೇನಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂದು ಹೆಸರು ಬದಲಾಗಿದೆ. ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ (ಹೊಸ ಕಟ್ಟಡ) ರೂಂ.2ರ ಮತಗಟ್ಟೆಯು ಚಿತ್ರದುರ್ಗ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ, ಶ್ರೀ ತರಳಬಾಳು ಜಗದ್ಗುರು ಶಿಶುವಿಹಾರ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ರೂಂ-2 (ಹೊಸಕಟ್ಟಡ) ಎಂದು ಹೆಸರು ಬದಲಾಗಿದೆ. ಮತಗಟ್ಟೆ ಸಂಖ್ಯೆ 152 ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ (ಹೊಸ ಕಟ್ಟಡ) ರೂಂ.3ರ ಮತಗಟ್ಟೆಯು ಚಿತ್ರದುರ್ಗ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ, ಶ್ರೀ ತರಳಬಾಳು ಜಗದ್ಗುರು ಶಿಶುವಿಹಾರ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ರೂಂ-3 (ಹೊಸಕಟ್ಟಡ) ಎಂದು ಹೆಸರು ಬದಲಾಗಿದೆ. ಚಿತ್ರದುರ್ಗ ನಗರದ ಜೆ.ಸಿ.ಆರ್ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಹೊಸ ಕಟ್ಟಡ) ಮತಗಟ್ಟೆಯು ಚಿತ್ರದುರ್ಗ ನಗರದ ವಿ.ಪಿ.ಬಡಾವಣೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಹೊಸಕಟ್ಟಡ) ಎಂದು ಹೆಸರು ಬದಲಾಗಿದೆ.
ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 6 ಮರಡಿಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರೂಂ-1 ಮತಗಟ್ಟೆಯು ಮರಡಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ರೂಂ-1 ಎಂದು ಹೆಸರು ಬದಲಾಗಿದೆ. ಮತಗಟ್ಟೆ ಸಂಖ್ಯೆ 7 ಮರಡಿಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರೂಂ-2 ಮತಗಟ್ಟೆಯು ಮರಡಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ರೂಂ-2 ಎಂದು ಹೆಸರು ಬದಲಾಗಿದೆ. ಮತಗಟ್ಟೆ ಸಂಖ್ಯೆ 8 ಮರಡಿಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರೂಂ-3 ಮತಗಟ್ಟೆಯು ಮರಡಿಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ರೂಂ-3 ಎಂದು ಹೆಸರು ಬದಲಾಗಿದೆ. ಮತಗಟ್ಟೆ ಸಂಖ್ಯೆ 63 ಹರಿಯಬ್ಬೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರೂಂ-1 ಮತಗಟ್ಟೆಯು ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆ ರೂಂ-1 ಎಂದು ಹೆಸರು ಬದಲಿಸಲಾಗಿದೆ. ಮತಗಟ್ಟೆ ಸಂಖ್ಯೆ 64 ಹರಿಯಬ್ಬೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರೂಂ-2 ಮತಗಟ್ಟೆಯು ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆ ರೂಂ-2 ಎಂದು ಹೆಸರು ಬದಲಿಸಲಾಗಿದೆ.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 175 ನಾಯಕನಹಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಮತಗಟ್ಟೆಯು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ಎಂದು ಹೆಸರು ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
=======
ಮತಗಟ್ಟೆಗಳ ಸ್ಥಳ, ಹೆಸರು ಬದಲಾವಣೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments