ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿಗೆ ಜಿಪಂ ಸಿಇಒ ಸೋಮಶೇಖರ್ ಚಾಲನೆ.

by | 10/04/24 | ಲೋಕಸಭಾ ಚುನಾವಣೆ-2024

ಚಿತ್ರದುರ್ಗ ಏ.10:
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಅವರು ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಇದೇ ಏಪ್ರಿಲ್ 26ರಂದು ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಂಡು, ತಮ್ಮ ಮತದಾನ ಹಕ್ಕು ಚಲಾಯಿಸಲು ಸುವರ್ಣ ಅವಕಾಶ. ಪ್ರತಿ ಐದು ವರ್ಷಕೊಮ್ಮೆ ಬರುವ ಈ ಹಬ್ಬದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಎಲ್ಲ ಅರ್ಹ ಮತದಾರರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು. ತಾವುಗಳು ಮತ್ತು ನಿಮ್ಮ ಸ್ನೇಹಿತರು, ಬಂಧುಗಳಿಗೆ ಮತ್ತು ಕುಟುಂಬದವರಿಗೆ ಮತದಾನ ಮಾಡುವಂತೆ ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.70ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.5ರಷ್ಟು ಮತದಾನದ ಪ್ರಮಾಣ ಹೆಚ್ಚಾಗಲು ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಯಾವುದೇ ಭಯ ಪಡದೇ ನಿರ್ಭಿತಿಯಿಂದ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ಎಂದು ಹೇಳಿದರು.
ಮತದಾನ ಜಾಗೃತಿ ಬೈಕ್ ರ್ಯಾಲಿಯು ಜಿಲ್ಲಾ ಪಂಚಾಯತ್‍ನಿಂದ ಪ್ರಾರಂಭವಾಗಿ ಮದಕರಿ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಗಾಂಧಿ ವೃತ್ತ, ಸಂಗೊಳ್ಳಿರಾಯಣ್ಣ ವೃತ್ತ ಮಾರ್ಗವಾಗಿ ಕನಕ ವೃತ್ತದಿಂದ ನೇರವಾಗಿ ಓನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾ ಪಂಚಾಯತ್‍ನಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಸ್.ಅಂತರಾಜು, ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕಿ ಸುಷ್ಮಾರಾಣಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಹೆಚ್.ಯರ್ರಿಸ್ವಾಮಿ, ರೂಪ ಕುಮಾರಿ, ಜಿಲ್ಲಾ ಪಂಚಾಯತ್ ಎಲ್ಲಾ ಶಾಖೆಗಳ ಮುಖಸ್ಥರು, ಸಿಬ್ಬಂದಿಗಳು ಮತ್ತು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page