ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ ಚಾಲನೆ ಗಮನ ಸೆಳೆದ ವಿಕಲಚೇತನರ ಬೈಕ್ ರ್ಯಾಲಿ

by | 18/04/23 | ಚುನಾವಣೆ-2023

ಚಿತ್ರದುರ್ಗ ಏ.18:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರಿಂದ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.
ಇಲ್ಲಿನ ಮದಕರಿ ನಾಯಕ ವೃತ್ತದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ ಶೇಕಡವಾರು ಪ್ರಮಾಣ ಹೆಚ್ಚಿಸುವ ಹಾಗೂ ನೈತಿಕ ಮತದಾನಕ್ಕೆ ಹೆಚ್ಚಿಸುವ ಸಂಬಂಧ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ವಿಕಲಚೇತನರ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು, ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಸ್ವೀಪ್ ಸಮಿತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರು ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚನಾವಣೆಯಲ್ಲಿ ಎಲ್ಲ ಮತದಾರರು ನೈತಿಕ ಮತದಾನ ಮಾಡಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ಜಿಲ್ಲೆಯ ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗಿಯಾಗಿ ಪ್ರಜಾಪ್ರಭುತ್ವ ಸದೃಢಗೊಳಿಸಬೇಕು ಎಂದರು.
ಚಿತ್ರದುರ್ಗ ನಗರದ ಮದಕರಿ ನಾಯಕ ವೃತ್ತದಿಂದ ಆರಂಭವಾದ ವಿಕಲಚೇತನರ ಬೈಕ್ ರ್ಯಾಲಿಯು, ಅಂಬೇಡ್ಕರ್ ವೃತ್ತ, ಮಹಾವೀರ ವೃತ್ತ, ಎಸ್‍ಬಿಎಂ ವೃತ್ತ, ಗಾಂಧಿ ವೃತ್ತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದವರೆಗೂ ಸಂಚರಿಸಿ, ನಂತರ ಜಿಲ್ಲಾಧಿಕಾರಿ ಕಚೇರಿ ವೃತ್ತ ತಲುಪಿತು. ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ನಮ್ಮ ಮತ ನಮ್ಮ ಹಕ್ಕು, ನೇತ್ರದಾನ ಮಹಾದಾನ, ಮತದಾನ ಶ್ರೇಷ್ಟದಾನ, ಮತ ಮಾಡಿ, ಮತ ಮಾಡಿಸಿ, ಮತದಾನ ನಮ್ಮ ಕರ್ತವ್ಯ, ನಿಮ್ಮ ಮತ ನಾಡಿಗೆ ಹಿತ, ಮತದಾನ ಪವಿತ್ರ ದಾನ, ಎಲ್ಲರೂ ತಪ್ಪದೇ ಮತದಾನ ಮಾಡಿ, ಸದೃಢ ಭಾರತಕ್ಕಾಗಿ ನನ್ನ ಮತದಾನ, ಮೇ 10ರಂದು ಬುಧವಾರ ತಪ್ಪದೇ ಎಲ್ಲರೂ ಮತದಾನ ಮಾಡಬೇಕು ಎಂದು ಸಂದೇಶ ಸಾರುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಎಂ.ಸಿ.ಸಿ ನೋಡೆಲ್ ಅಧಿಕಾರಿ ಹನುಮಂತಪ್ಪ ಅವರು ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ, ಸಹಾಯಕ ನಿರ್ದೇಶಕ ಪಿ.ಟಿ.ಧನಂಜಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಎಂ.ಆರ್.ಡಬ್ಯೂ ಎನ್.ಮೈಲಾರಪ್ಪ ಸೇರಿದಂತೆ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಹಾಗೂ ವಿಕಲಚೇತನರು ಇದ್ದರು.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page