ಮತದಾನ ಹೆಚ್ಚಳಕ್ಕೆ ಜಾಗೃತಿ : ನಗರ ಪ್ರದೇಶದಲ್ಲಿ ಜಾಥಾ

by | 28/03/24 | ಲೋಕಸಭಾ ಚುನಾವಣೆ-2024


ಚಿತ್ರದುರ್ಗ ಮಾ.28:
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ ವಾಕಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ನಗರದ ದೊಡ್ಡಪೇಟೆ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ ಮತಗಟ್ಟೆ ಪ್ರದೇಶಗಳಲ್ಲಿ ವಾಕಥಾನ್ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್, ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನ ಪ್ರಮಾಣ ದಾಖಲಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಜಾಗೃತಿಗಾಗಿ ವಾಕ್‍ಥಾನ್, ಮ್ಯಾರಥಾನ್ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮನೆ ಮನೆಗೆ ತೆರಳಿ ಮತದಾನದ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ವಾಕ್‍ಥಾನ್ ಜಾಥಾ ಕಾರ್ಯಕ್ರಮದಲ್ಲಿ ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ, ಮತದಾನ ಮಾಡುವುದು ಪ್ರತಿಯೊಬ್ಬ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಬಲಗೊಳಿಸಿ, ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ, ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ. ಮತದಾನ ದೇಶವನ್ನು ರೂಪಿಸುತ್ತದೆ. ನೇತ್ರದಾನ ಮಹಾದಾನ, ಮತದಾನ ಶ್ರೇಷ್ಟದಾನ ಎಂಬಿತ್ಯಾದಿ ಜಾಗೃತಿ ಫಲಕಗಳು ಗಮನ ಸೆಳೆದವು.
ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆ ಮುಂಭಾಗದ ಪ್ರಾರಂಭವಾದ ವಾಕಥಾನ್, ಪಿಲ್ಟರ್ ಹೌಸ್, ಸಂಪಿಗೆ ಸಿದ್ದೇಶ್ವರ ಶಾಲೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಉಜ್ಜಿನಿ ಮಠದ ರಸ್ತೆ, ಕರುವಿನಕಟ್ಟೆ ವೃತ್ತ, ಜೋಗಿಮಟ್ಟಿ ರಸ್ತೆ, ಜಂಟಿ ನಿರ್ದೇಶಕರ ಕೈಗಾರಿಕಾ ಇಲಾಖೆ ಕಚೇರಿ, ಪಟ್ಟದ ಪರಮೇಶ್ವರ ಶಾಲೆಯ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ನಗರಸಭೆ ಪೌರಾಯಕ್ತೆ ಎಂ.ರೇಣಕಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page