ಮತದಾರರಿಗೆ‌ ಆಮಿಷ ಒಡ್ಡುವುದು ಕಂಡುಬಂದರೆ‌ ಕಠಿಣ ಕ್ರಮ*

by | 13/03/23 | Uncategorized, ಸುದ್ದಿ

ಮಂಡ್ಯ ಮಾ13
ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಿಗೆ ಆಮಿಷ ಒಡ್ಡುವುದರ ಬಗ್ಗೆ ದೂರು ಕೇಳಿ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ವಿಧಾನಸಭಾ ‌ಸಾರ್ವತ್ರಿಕ ಚುನಾವಣಾ 2023ರ ಹಿನ್ನಲೆ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ವಿವಿಧ ರಾಜಕೀಯ ‌ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಚುನಾವಣೆಗಳು ನ್ಯಾಯಸಮ್ಮತ ಹಾಗೂ‌ ಪಾರದರ್ಶಕವಾಗಿ ನಡೆಯಬೇಕು ಎಂದರು.

ಮತದಾರರಿಗೆ ಆಮಿಷ ಒಡ್ಡಲು ಅಕ್ರಮವಾಗಿ ವಸ್ತುಗಳು ಹಣ ಸಂಗ್ರಹಿಸಿಟ್ಟಿರುವ ಬಗ್ಗೆ ದೂರು ಕೇಳಿ ಬಂದರೆ ದಾಳಿ ನಡೆಸಿ ನಿಯಮಾನುಸಾರ ಎಫ್ ಐ ಆರ್ ದಾಖಲು ಮಾಡಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾರಿಕಾರಿ ಎನ್ ಯತೀಶ್ ಅವರು ಮಾತನಾಡಿ ಚುನಾವಣೆಯ ಸಭೆ ಸಮಾರಂಭಗಳಲ್ಲಿ ಪ್ರಚೋದನಕಾರಿ ಭಾಷಣ ಹಾಗೂ ಅಹಿತಕರ ಘಟನೆಗಳು ಕಂಡು ಬಂದರೆ ಆಯೋಜಕರ ಮೇಲೆ ಎಫ್ ಐ ಆರ್ ದಾಖಲು ಮಾಡಿ ಕ್ರಮಕೈಗೊಳ್ಳಲಾಗುವುದು ಎಂದರು.

ಅಬಕಾರಿ ಇಲಾಖೆಯ ಉಪ ಆಯುಕ್ತೆ ಮಹದೇವಿ ಬಾಯಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಂದು ವಾರದಲ್ಲಿ 129 ದಾಳಿ ನಡೆಸಿ 117 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. 78.02 ಲೀ. ಮದ್ಯ, 0.400 ಲೀ ಬೀರ್, 0.850 ಗ್ರಾಂ ಗಾಂಜಾ ಹಾಗೂ 3 ವಾಹನವನ್ನು ವಶಪಡಿಸಿಕೊಂಡಿದ್ದೇವೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಉಪ ವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page