ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜನಸಂಖ್ಯೆಯ ಶೇ 76.60 ರಷ್ಟು ಮತದಾರರು, ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಮತದದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ಸೂಚನೆ.

by | 06/11/23 | ಸುದ್ದಿ


ದಾವಣಗೆರೆ,ನವೆಂಬರ್.6 ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ತಿಳಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ತಿಳಿಸಿದರು. ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಮತ್ತು ಅಂತಿಮ ಮತದಾರರ ಪಟ್ಟಿಯನ್ನು 2024 ರ ಜನವರಿ 5 ರಂದು ಪ್ರಕಟಿಸಲಾಗುತ್ತದೆ.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 ಕ್ಕೆ ಜಿಲ್ಲೆಯಲ್ಲಿ 947205 ಗಂಡು, 951359 ಹೆಣ್ಣು ಸೇರಿ 1898000 ಜನಸಂಖ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಜನಸಂಖ್ಯೆಗನುಗುಣವಾಗಿ ಶೇ 76.60 ರಷ್ಟು ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯನ್ವಯ 726931 ಪುರುಷ, 726887 ಮಹಿಳೆ ಸೇರಿ 1453818 ಮತದಾರರಿದ್ದಾರೆ.
ಯುವ ಮತದಾರರು; ಕರಡು ಪಟ್ಟಿಯನ್ವಯ ಯುವ ಮತದಾರರ ವಿವರದನ್ವಯ 18-19 ವರ್ಷದ 10493 ಪುರುಷ, 8815 ಮಹಿಳೆ, ಇತರೆ 2 ಸೇರಿ 19310 ಯುವ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ವಿವರ ನೀಡಿದರು. ಈ ವೇಳೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತದಾರರ ಪಟ್ಟಿಯಲ್ಲಿ ನೊಂದಾಯಿಸಲು ವೀಕ್ಷಕರಾದ ಗುಂಜನ್ ಕೃಷ್ಣ ಅವರು ತಿಳಿಸಿದರು.
ಮತಗಟ್ಟೆ ಮಟ್ಟದ ಏಜೆಂಟ್ ನೇಮಿಸಿ; ಎಲ್ಲಾ ಪಕ್ಷದವರು ಮತಗಟ್ಟೆ ಮಟ್ಟದ ಏಜೆಂಟ್‍ಗಳನ್ನು ನೇಮಕ ಮಾಡಿ ಪಟ್ಟಿ ನೀಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಪಕ್ಷಗಳ ಮುಖಂಡರಿಗೆ ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page