ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಸೂಪರ್ ಚೆಕ್ಮ ತದಾರರ ಪಟ್ಟಿ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ವಿವಿಧ ಮತಗಟ್ಟೆಗಳಿಗೆ ಭೇಟಿ.

by | 20/12/23 | ಸುದ್ದಿ


ಚಿತ್ರದುರ್ಗ.ಡಿ.20:
ಜಿಲ್ಲೆಯಲ್ಲಿ ಜರುಗುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಚುನಾವಣಾ ಆಯೋಗದ ಸೂಚನೆಯಂತೆ ಸೂಪರ್ ಚೆಕ್ ನಡೆಸುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಬುಧವಾರ ನಗರದ ವಿವಿಧ ಮತಗಟ್ಟೆಗಳಿಗೆ ತೆರಳಿ ವೀಕ್ಷಣೆ ನಡೆಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ಅವರು ಜಿಲ್ಲೆಗೆ ಭೇಟಿ ನೀಡಿ ಎರಡನೆ ಹಂತದ ಪರಿಶೀಲನೆ ಕಾರ್ಯ ಕೈಗೊಂಡರು. ಇದರ ಅಂಗವಾಗಿ, ನಗರದ ಸರಸ್ವತಿ ಕಾನೂನು ಕಾಲೇಜು, ಜೆ.ಜೆ.ಹಟ್ಟಿ, ರೈಲ್ವೇ ನಿಲ್ದಾಣ ಬಳಿಯ ಸದಾನಂದಯ್ಯ ಬಡಾವಣೆ, ನೀಲಕಂಠೇಶ್ವರ ಬಡಾವಣೆ ಹಾಗೂ ಮಲ್ಲಾಪುರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿದ ಅವರು, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ, ನಿಷ್ಕ್ರಮಣೆ (ಡಿಲೀಟ್) ಕುರಿತು ಮತಗಟ್ಟೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮತಗಟ್ಟೆ ಅಧಿಕಾರಿಗಳು ತಪ್ಪದೇ ನೊಂದಣಿ ವಹಿ ನಿರ್ವಹಿಸಬೇಕು. ಪ್ರತಿ ಮನೆ ಮನೆಗೂ ತೆರಳಿ 18 ವರ್ಷ ತುಂಬಿದ ಎಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವಂತೆ ಪ್ರೇರೇಪಿಸಬೇಕು. ಮಹಿಳಾ ಮತದಾರರ ನೊಂದಣಿ ಕೈತಪ್ಪಿ ಹೋಗದಂತೆ ಜಾಗೃತಿ ವಹಿಸಬೇಕು ಎಂದು ಮತದಾರರ ಪಟ್ಟಿ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ಮತಗಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಕ್ಕೂ ಮುನ್ನಾ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ಬದಲಾವಣೆಗಾಗಿ ಅರ್ಜಿ ಸಲ್ಲಿಸಿದ ಫಾರಂ-6 ಹಾಗೂ 7 ಅರ್ಜಿಗಳ ಮೇಲ್ವಿಚಾರಣೆ ನಡೆಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ನಗರಸಭೆ ಆಯುಕ್ತೆ ರೇಣುಕಾ, ಹೊಳಲ್ಕೆರೆ ತಹಶೀಲ್ದಾರ್ ಬೇಬಿ ಫಾತೀಮಾ, ಹಿರಿಯೂರು ತಹಶೀಲ್ದಾರ್ ರಾಜೇಶ್, ಚುನಾವಣೆ ಶಾಖೆ ತಹಶೀಲ್ದಾರ್ ಸಂತೋಷ ಕುಮಾರ್ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page