ಮನುಷ್ಯನ ಮನಸ್ಸಿನಮೇಲೆ ನೂರುಭಾಷಣಗಳು ಬೀರದ ಪ್ರಭಾವ ಒಂದು ಹಾಡು ಬೀರಬಲ್ಲದು: ಬಿ.ಪಿ.ತಿಪ್ಪೇಸ್ವಾಮಿ.

by | 20/12/23 | ಶಿಕ್ಷಣ


ಹಿರಿಯೂರು :
ಮನುಷ್ಯನ ಮನಸ್ಸಿನ ಮೇಲೆ ನೂರು ಭಾಷಣಗಳು ಬೀರದ ಪ್ರಭಾವವನ್ನು ಒಂದು ಹಾಡು ಬೀರಬಲ್ಲದು, ಜನಸಾಮಾನ್ಯರ ನೋವು ಹಾಡಿನ ಧ್ವನಿಯಾಗಿ ಹೊರಹೊಮ್ಮಿದರೆ ಕೋಟಿ ಕೋಟಿ ಬಾಂಬ್ ಗಳಿಗಿಂತ ತೀಕ್ಷ್ಣದಾದ ಅದರ ತೀವ್ರತೆಯನ್ನು ತಡೆಯಲು ಅಸಾಧ್ಯ ಎಂಬುದಾಗಿ ವಿದ್ಯಾಸಂಸ್ಥೆ ಮುಖ್ಯಸ್ಥರಾದ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ ಹಾಗೂ ಮದಕರಿಯ ಯುವಕ ಸಂಘ ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಡಿನಾಡ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಸಮಾಜವು ನಿರಂಕುಶ ಆಡಳಿತದಲ್ಲಿದ್ದಾಗ ಮತ್ತು ಸಾಂಪ್ರದಾಯಿಕ ಮಾಧ್ಯಮಗಳು ಜನರು ತಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಜನ ಜಾಗೃತಿಗೊಳಿಸುವಲ್ಲಿ ತನ್ನ ಪಾತ್ರವನ್ನು ವಹಿಸಲು ವಿಫಲವಾದಾಗ ಅದು ಸಮುದಾಯಗಳನ್ನು ಭರವಸೆಯ ಪರ್ಯಾಯ ಮೂಲಗಳನ್ನು ನೋಡುವಂತೆ ಒತ್ತಾಯಿಸುತ್ತದೆ ಎಂದರಲ್ಲದೆ,
ಇಂದು ಅದು ಸಾಮಾಜಿಕವಾಗಿರಬಹುದು, ಆದರೆ ಹಿಂದಿನ ಯುಗದಲ್ಲಿ ಜನರ ಜೀವನವನ್ನು ವೃದ್ಧಿಸಿದ ಜಾನಪದ ಹಾಡುಗಳು ಮತ್ತು ಜಾನಪದ ಸಾಹಿತ್ಯದ ಪರ್ಯಾಯ ಮಾಧ್ಯಮವಾಗಿದೆ, ಮನುಷ್ಯ ತನ್ನ ಹಾಡುಗಳಿಂದ ನೂರಾರು ಸಾವಿರ ಜನರನ್ನು ಪ್ರೇರೇಪಿಸಿದನು. ಅದು ಸರಳವಾದ ಶಕ್ತಿಯುತ ನೀತಿಬೋಧಕ ಮತ್ತು ಪ್ರಚೋದಿಸುವಂತಿತ್ತು, ಜನಮಾನಸದ ನೋವನ್ನು ಹಾಡಿನ ಮೂಲಕ ಪ್ರಭುತ್ವಕ್ಕೆ ಸವಾಲು ಹಾಕುವಲ್ಲಿ ಗದ್ದರ್ ಅವರು ಈ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿದ್ದನ್ನು ಈ ಸಮಯದಲ್ಲಿ ನೆನೆಯಬಹುದು ಎಂಬುದಾಗಿ ಹೇಳಿದರು.
ವಾಣಿ ಕಾಲೇಜಿನ ಪ್ರಾಚಾರ್ಯರಾದ ಡಾ. ಆರ್.ಮಹೇಶ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಮುಂತಾದ ಮಹಾನ್ ನಾಯಕರ ಚಿಂತನೆಗಳು ಇಡೀ ಮನುಕುಲಕ್ಕೆ ಅವಶ್ಯಕ ಅಲ್ಲದೆ ಪ್ರಸ್ತುತ ನೆಮ್ಮದಿಯ ಬದುಕಿಗೆ ದಾರಿದೀಪವಾಗಿವೆ, ಆನಂತರ ಅಂಥವರ ವೈಚಾರಿಕ ಚಿಂತನೆ ಹಾಗೂ ಸಂದೇಶಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂಬುದಾಗಿ ಹೇಳಿದರು.
ಸಹಾಯಕ ಪ್ರಾಧ್ಯಾಪಕರಾದ ಡಾ.ಧರಣೇಂದ್ರಯ್ಯ ಮಾತನಾಡಿ, ಮುಂದಿನ ಜಾಗತೀಕರಣದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಲಾವಿದರ ಸೇವೆ ಅನನ್ಯ ಕಲಾವಿದರ ಬದುಕಿಗೆ ಸರಕಾರಗಳು ಕೈಜೋಡಿಸಬೇಕು ಎಂಬುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ವಯೋಲಿನ್ ವಾದನ ಡಾ.ಟಿ.ಭವ್ಯರಾಣಿ, ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯನ ಸುಜಿತ, ಗೊರವರ ಕುಣಿತ ಶಿವಣ್ಣ, ಸುಗಮ ಸಂಗೀತ ಗಾಯನ ಕೆ.ಗಂಗಾಧರ್, ವಚನ ಸಂಗೀತ ಎಸ್.ಮೈಲಾರಿ ತುರುವನೂರು, ಜನಪದ ಸಂಗೀತ ಹಿಮಂತರಾಜ, ದಾಸರಪದ ಅಂಜಿನಪ್ಪ, ತತ್ವಪದ ಮುಂತಾದ ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ.ರಂಗಪ್ಪ ವಹಿಸಿದ್ದರು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶಾಂತಮ್ಮತಿಪ್ಪೇಸ್ವಾಮಿ, ಮದಕರಿ ಯುವಕ ಸಂಘದ ಅಧ್ಯಕ್ಷ ಕೆ.ಸೋಮಶೇಖರ್, ಮುಖಂಡರಾದ ಹುಚ್ಚವ್ವನಹಳ್ಳಿ ವೆಂಕಟೇಶ್, ತುರುವನೂರು ಜಗನ್ನಾಥ್, ಪೋಷಕ ಪ್ರತಿನಿಧಿಗಳಾದ ಟಿಬಿಸರ್ಕಲ್ ಕರಿಯಮ್ಮ, ಮಂಜುಳಾ, ಶಾಲೆಯ ಮುಖ್ಯ ಶಿಕ್ಷಕಿ ಎಂ.ದೀಪ, ವಿದ್ಯಾಯಾದವ್, ರಾಜೇಶ್ವರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಮಿಕ ನುಡಿ ಹೊರ ಬಿದ್ದಿದೆ....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page